ಹುಣಸೂರು: ಒಳಮೀಸಲಾತಿ ಆದೇಶದಂತೆ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಸಂವಿಧಾನ ವೃತ್ತದಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ತೆರಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ರಸ್ತೆ ತಡೆದು ಪ್ರತಿಭಟನಕಾರರು ಘೋಷಣೆ ಕೂಗಿದರು.

ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ರಾಜ್ಯಾಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ‘ಒಳಮೀಸಲಾತಿ ಜಾರಿಗೊಳಿಸಿ ರಾಜ್ಯ ಸರ್ಕಾರದಲ್ಲಿ ಖಾಲಿರುವ ಹುದ್ದೆ ಭರ್ತಿ ಮಾಡುವ ಬಗ್ಗೆ ಮಾರ್ಚ್ 27ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ತೀರ್ಮಾನಿಸಬೇಕು’ ಎಂದು ಹೇಳಿದರು.

ರಾಜ್ಯ ಸರ್ಕಾರ ಚುನಾವಣೆ ಸಮಯದಲ್ಲಿ ಮಾದಿಗ ಸಮುದಾಯದ ಮತ ಸೆಳೆಯಲು ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರಿ ಹುದ್ದೆ ಒಳಗೊಂಡಂತೆ ಇತರೆ ಎಲ್ಲಾ ಸವಲತ್ತು ನೀಡುವ ಭರವಸೆ ನೀಡಿತ್ತು. 2 ವರ್ಷ ಅಧಿಕಾರ ಅನುಭವಿಸಿದ ಬಳಿಕವೂ ಒಳಮೀಸಲಾತಿ ಅನುಷ್ಠಾನಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ ಎಂದರು.

‘ಸುಪ್ರೀಂಕೋರ್ಟ್ ತೀರ್ಪಿನ ನಂತರದ ಹೋರಾಟದ ಒತ್ತಡಕ್ಕೆ ಮಣಿದ ಸರ್ಕಾರ, ಸಚಿವ ಸಂಪುಟದಲ್ಲಿ ಒಳಮೀಸಲಾತಿ ಅಂಗೀಕರಿಸಿ ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದರು. ಚಳಿಗಾಲದ ಅಧಿವೇಶನದಲ್ಲಿ ಶಾಸನ ಬದ್ಧ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ ಬಳಿಕವೂ ಒಳಮೀಸಲಾತಿ ಅನುಷ್ಠಾನಗೊಳಿಸಿ ಸರ್ಕಾರಿ ಹುದ್ದೆ ಭರ್ತಿ ಮಾಡಲು ಕಾಂಗ್ರೆಸ್ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ದೂರಿದರು.

‘ರಾಜ್ಯದಲ್ಲಿ ಸಿದ್ದರಾಮಯ್ಯನವರು ಹಿಂದುಳಿದ ಸಮುದಾಯ ಸೆಳೆಯಲು ಅಹಿಂದ ಅಸ್ತ್ರ ಬಳಸಿ ಮತ ಪಡೆಯುವ ತಂತ್ರಗಾರಿಕೆ ಇದೆ. ಈ ಬಾರಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಮಾದಿಗ ಸಮುದಾಯ ಅಹಿಂದ ಅಸ್ತ್ರಕ್ಕೆ ಬಲಿಯಾಗುವುದಿಲ್ಲ. ಒಳಮೀಸಲಾತಿ ಅನುಷ್ಠಾನದಲ್ಲಿ ಕೈಗೊಂಡ ತೀರ್ಮಾನದಿಂದ ಕಾಂಗ್ರೆಸ್ ವಿರುದ್ಧ ನಿಲ್ಲಬೇಕಾದ ಅನಿವಾರ್ಯ ಎದುರಾಗಿದೆ’ ಎಂದು ತಿಳಿಸಿದರು.

‘ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಿ ಅನುಷ್ಠಾನಗೊಳಿಸಿದೆ. ರಾಜ್ಯದಲ್ಲಿ ಈ ಸಮುದಾಯಕ್ಕೆ ನಿಗದಿಗೊಳಿಸಿದ ಶೇಕಡವಾರು ಪ್ರಮಾಣದಲ್ಲಿ ಉದ್ಯೋಗ ನೀಡುವ ಬದಲಿಗೆ ಪರಿಶಿಷ್ಟ ಜಾತಿಗೆ ಶೇ 2ರಷ್ಟು ಕಡಿತ, ಪರಿಶಿಷ್ಟ ಪಂಗಡಕ್ಕೆ ಶೇ 4ರಷ್ಟು ಕಡಿತಗೊಳಿಸಿ ಸರಾಸರಿ 3 ಸಾವಿರ ಸರ್ಕಾರಿ ಹುದ್ದೆ ಕೈ ತಪ್ಪಿಸುವಂತೆ ವ್ಯವಸ್ಥಿತವಾಗಿ ಸಂಚು ಹೂಡಿದೆ’ ಎಂದು ಆರೋಪಿಸಿದರು.

ಉಪವಿಭಾಗಾಧಿಕಾರಿ ಕಾವ್ಯಾರಾಣಿ, ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ರಾಜ್ಯ ಉಪಾಧ್ಯಕ್ಷ ಶಿವಕುಮಾರ್, ಬೇಡಿಕೆಯ ಪಟ್ಟಿ ವಾಚಿಸಿದರು. ತಾಲ್ಲೂಕು ಮಾದಿಗ ಸಮುದಾಯದ ಅಧ್ಯಕ್ಷ ಶಿವಣ್ಣ, ಸತೀಶ್ ಕುಮಾರ್, ರಾಯನಹಳ್ಳಿ ಸ್ವಾಮಿ, ಪರಶುರಾಮ್, ಬೆಳ್ತೂರು ವೆಂಕಟೇಶ್, ಹರೀಶ್, ಲೋಕೇಶ್, ಸಣ್ಣಮಾದಯ್ಯ, ಹೆಮ್ಮಿಗೆ ಚಂದ್ರು, ಗೋವಿಂದ, ಕಾಂಕ್ರಿಟ್ ರಾಜ, ಬಲ್ಲೇನಹಳ್ಳಿ ಕೆಂಪರಾಜ್, ಸಂತೋಷ್, ಯಜಮಾನ ದಾಸಪ್ಪ, ಆರ್.ಮಹದೇವ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-38-675275597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.