ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಬದಲಾಗುವುದಾದರೆ, ದಲಿತರಿಗೆ ಅವಕಾಶ ನೀಡಿ: ಗುರುಪ್ರಸಾದ್ ಕೆರಗೋಡು

Published 1 ಜುಲೈ 2024, 16:31 IST
Last Updated 1 ಜುಲೈ 2024, 16:31 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಗತ್ಯವಿಲ್ಲ. ಬದಲಾವಣೆ ಮಾಡಬೇಕೆಂದಿದ್ದರೆ, ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ, ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದಲಿತ ಸಮುದಾಯದವರಿಗೆ ಅವಕಾಶ ನೀಡಲಿ’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸಂಚಾಲಕ ಗುರುಪ್ರಸಾದ್ ಕೆರಗೋಡು ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ತಮ್ಮ ಸಮುದಾಯದವರಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಕೆಲವು ಮಠಾಧಿಪತಿಗಳು, ಜನಪ್ರತಿನಿಧಿಗಳು ಧ್ವನಿ ಎತ್ತುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರಿಗೂ ಸಿಗಲಿ ಎನ್ನುತ್ತಾರೆ. ಆದರೆ, ಎಸ್‌ಸಿ, ಎಸ್‌ಟಿ, ಮುಸ್ಲಿಂ ಸಮುದಾಯಕ್ಕೆ ಅವಕಾಶ ಎಲ್ಲಿ ಸಿಕ್ಕಿದೆ ? ಇವರಾರು ಈ ಬಗ್ಗೆ ಏಕೆ ಧ್ವನಿ ಎತ್ತುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT