ನಂಜನಗೂಡು: ತಾಲ್ಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, 20 ಕರುಗಳನ್ನು ರಕ್ಷಿಸಿದ್ದಾರೆ.

ತಾಲ್ಲೂಕಿನ ಜಯಪುರ ಪೊಲೀಸರಿಗೆ ಅಕ್ರಮವಾಗಿ ಜಾನುವಾರು ಸಾಗಾಟದ ಮಾಹಿತಿ ದೊರೆತಿದ್ದು, ಪಿಎಸ್ಐ ಹೇಮಾವತಿ ಅವರು ವಾಹನವನ್ನು ಹಿಂಬಾಲಿಸಿದ್ದಾರೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಖದೀಮರು ಹುಲ್ಲಹಳ್ಳಿ ರಸ್ತೆ ಕಡೆಗೆ ತಿರುಗಿದ್ದಾರೆ, ಕೂಡಲೇ ಹೇಮಾವತಿ ಅವರು ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದು, ಅವರು ತಮ್ಮ ಸಿಬ್ಬಂದಿಯೊಂದಿಗೆ ಹಿಡಿಯಲು ಮುಂದಾದಾಗ ಅಹಲ್ಯಾ ಗ್ರಾಮದ ಬಳಿ ವಾಹನ ಪಲ್ಟಿಯಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.

ಸ್ಥಳೀಯರ ಸಹಾಯದಿಂದ 20 ಕರುಗಳನ್ನ ರಕ್ಷಿಸಿ, ಮೈಸೂರಿನ ಪಿಂಜರಾಪೋಲ್ಗೆ ರವಾನಿಸಿ ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.