ಮೈಸೂರು: ‘ರಾಜ್ಯದ ಹಣಕಾಸಿನ ಪರಿಸ್ಥಿತಿ ಸರಿ ಇಲ್ಲ ಎಂದು ಹೇಳುತ್ತಿದ್ದೀರಿ. ಪರಿಸ್ಥಿತಿಗೆ ಅನುಗುಣವಾಗಿ ಉತ್ತಮ ಬಜೆಟ್ ಮಂಡಿಸುವ ಪ್ರಯತ್ನ ನಡೆಸುತ್ತೇನೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿ ಬದಲಾವಣೆ ಖಚಿತ. ಅದು ಯಾವಾಗ ಎಂದು ಯಡಿಯೂರಪ್ಪ ಹೇಳಬೇಕು ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮಾಧ್ಯಮದವರು ಮತ್ತು ಸಿದ್ದರಾಮಯ್ಯ ಕೂತು ದಿನಾಂಕ ನಿಗದಿಪಡಿಸಿ’ ಎಂದು ಚಾಟಿ ಬೀಸಿದರು.

ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್‌ರಚನೆಯೋ ಎಂಬುದನ್ನು ಜ. 13 ಅಥವಾ 14ರವರೆಗೆ ಕಾದು ನೋಡಿ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.