ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಿಗ್ರಾಮ ತಾಲ್ಲೂಕು ಪಂಚಾಯಿತಿ ಕಚೇರಿ ಉದ್ಘಾಟನೆ

ಮಿರ್ಲೆ ಗ್ರಾಮದಲ್ಲಿ ಉಪ ನೋಂದಣಾಧಿಕಾರಿ ಕಚೇರಿ ನಿರ್ಮಾಣಕ್ಕೆ ಕ್ರಮ
Last Updated 18 ಜನವರಿ 2023, 4:11 IST
ಅಕ್ಷರ ಗಾತ್ರ

ಸಾಲಿಗ್ರಾಮ: ಪಟ್ಟಣದ ರಾಮನಾಥಪುರ ರಸ್ತೆಯಲ್ಲಿ ತಾಲ್ಲೂಕು ಪಂಚಾಯಿತಿ ಆಡಳಿತ ಕಚೇರಿಯನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸೋಮವಾರ ಉದ್ಘಾಟಿಸಿದರು.

ಶಾಸಕ ಸಾ.ರಾ.ಮಹೇಶ್‌ ಮಾತನಾಡಿ, ‘ಹೊಸ ತಾಲ್ಲೂಕಿನ ಗಡಿ ಭಾಗದ ಜನರಿಗೆ ಸರ್ಕಾರದ ಸವಲತ್ತು ಗಳು ಆದಷ್ಟು ಬೇಗ ಸಿಗಲೆಂಬ ಉದ್ದೇಶ, ತಾಲ್ಲೂಕಿನ ಆಡಳಿತವನ್ನು ಸುಗಮವಾಗಿ ನಡೆಸಲು ಹಂತ ಹಂತವಾಗಿ ಕಚೇರಿಗಳನ್ನು ತೆರೆಯಲಾಗುತ್ತಿದೆ. ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಇರುವ ಅವಳಿ ತಾಲ್ಲೂಕುಗಳನ್ನು ಸಮಾನವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಉದ್ದೇಶ’ ಎಂದರು.

‘ಉಪ ನೋಂದಣಾಧಿಕಾರಿ ಕಚೇರಿ ನಿರ್ವಹಣೆಗೆ ಉತ್ತಮವಾದ ಕಟ್ಟಡವಿಲ್ಲ ಕಾರಣ ಮಿರ್ಲೆ ಗ್ರಾಮದಲ್ಲಿ ₹1.70 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡವನ್ನು ನಿರ್ಮಿಸಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಕಟ್ಟಡ ನಿರ್ಮಾಣಕ್ಕೆ ಅಗತ್ಯ ಇರುವ ಹಣ ವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿಸಲಾಗಿದೆ’ ಎಂದು ತಿಳಿಸಿದರು.

‘ಕೆ.ಆರ್.ನಗರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯೇ ಹೊಸ ತಾಲ್ಲೂಕು ಪಂಚಾಯಿತಿಯಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುವರು. ಆದಷ್ಟು ಬೇಗ ಅಧಿಕಾರಿಯನ್ನು ನೇಮಕ ಮಾಡಿಸಲಾಗುವುದು’ ಎಂದರು.

ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥ ಸ್ವಾಮೀಜಿ, ಬೆಟ್ಟದಪುರ ಮಠದ ಸ್ವಾಮೀಜಿ, ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿ, ಉಪಾಧ್ಯಕ್ಷೆ ನೀಲಮ್ಮ, ಇಒ ಸತೀಶ್, ಮಿರ್ಲೆ ಅಣ್ಣೇಗೌಡ, ಸಿಪಿಐ ಶ್ರೀಕಾಂತ್, ಕುಪ್ಪಳ್ಳಿ ಸೋಮು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮೆಡಿಕಲ್ ರಾಜಣ್ಣ, ನಗರಾಧ್ಯಕ್ಷ ದೊಡ್ಮನೆ ಮಂಜು, ಪಿಡಿಒ ಎಚ್.ಡಿ.ಮಂಜುನಾಥ್, ಎ.ಟಿ.ಸೋಮಶೇಖರ್, ಸುಧಾ ರೇವಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT