‘ಸೆ.22ರಂದು ಚಿತ್ರದುರ್ಗದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು ಹಾಗೂ ಸದಸ್ಯರ ಒಪ್ಪಿಗೆಯಂತೆ ಹಲವು ನಿರ್ಣಯ ಕೈಗೊಳ್ಳಲಾಗಿದೆ. ಕಂದಾಯ ಇಲಾಖೆ ಅಭಿವೃದ್ಧಿಪಡಿಸಿರುವ ವೆಬ್ ಹಾಗೂ ಮೊಬೈಲ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ, ಸಿ–ವೃಂದದ ನೌಕರರ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ ಹಾಗೂ ಇನ್ನಿತರ ಸೌಲಭ್ಯ ಒದಗಿಸಬೇಕು’ ಎಂದು ಆಗ್ರಹಿಸಿದರು.