ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರಾಜ ಮಾರುಕಟ್ಟೆ: ‘ಒಂದೇ ಬಣ್ಣದ ಟಾರ್ಪಾಲು ಅಳವಡಿಸಿ’

ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಸೂಚನೆ
Published 25 ಮಾರ್ಚ್ 2024, 16:28 IST
Last Updated 25 ಮಾರ್ಚ್ 2024, 16:28 IST
ಅಕ್ಷರ ಗಾತ್ರ

ಮೈಸೂರು: ನಗರದ ದೇವರಾಜ ಮಾರುಕಟ್ಟೆಗೆ ನಗರ ಪಾಲಿಕೆ ಆಯುಕ್ತೆ ಎನ್.ಎನ್. ಮಧು ಸೋಮವಾರ ಭೇಟಿ ನೀಡಿ ಸ್ವಚ್ಛತೆ ಹಾಗೂ ಒತ್ತುವರಿ ಬಗ್ಗೆ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ‘ಪಾಲಿಕೆಯು ಅಂಗಡಿಗಳಿಗೆ ನಿಗದಿಪಡಿಸಿದಕ್ಕಿಂದ ಹೆಚ್ಚಿನ ಜಾಗವನ್ನು ಅತಿಕ್ರಮಿಸಿ ಪದಾರ್ಥಗಳನ್ನು ಜೋಡಿಸಲಾಗುತ್ತಿದೆ. ಅದಕ್ಕೆ ಬಿಸಿಲು ಬೀಳಬಾರದೆಂಬ ಕಾರಣಕ್ಕೆ ಟಾರ್ಪಾಲು ಹೊದಿಕೆ ಮಾಡಿರುವುದನ್ನು ಗಮನಿಸಿ ಶನಿವಾರ ಅವನ್ನು ತೆರವುಗೊಳಿಸಲಾಗಿದೆ’ ಎಂದರು.

‘ನಿಗದಿತ ಜಾಗದಲ್ಲೇ ನಿಮ್ಮ ಪದಾರ್ಥಗಳನ್ನಿಟ್ಟು ವ್ಯಾಪಾರ ನಡೆಸಬೇಕು. ಸಯ್ಯಾಜಿರಾವ್ ರಸ್ತೆ, ಚಿಕ್ಕಗಡಿಯಾರ ವೃತ್ತದಲ್ಲಿ ಫುಟ್‌ಪಾತ್ ನಲ್ಲಿ ವ್ಯಾಪಾರ ನಡೆಸಬಾರದು’ ಎಂದು ಸೂಚಿಸಿದರು.

‘ನಗರದ ಹೃದಯ ಭಾಗದಲ್ಲಿನ ಮಾರುಕಟ್ಟೆಯಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ನಿಷೇಧಿತ ಪ್ಲಾಸ್ಟಿಕ್‌ ಬಳಕೆಯಾಗುತ್ತಿರುವ ಮಾಹಿತಿಯಿದ್ದು, ‌ಅನೇಕ ಬಾರಿ ದಾಳಿ ನಡೆಸಲಾಗಿದೆ. ಅದನ್ನು ಮುಂದುವರಿಸಬೇಡಿ. ಅಂಗಡಿಗಳ ನೆರಳಿಗಾಗಿ ಆಕಾಶ ನೀಲಿ ಅಥವಾ ಬಿಳಿ ಬಣ್ಣದ ಟಾರ್ಪಾಲುಗಳನ್ನಷ್ಟೇ ಬಳಸಿ, ಒತ್ತುವರಿ ಮುಂದುವರೆದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಆರನೇ ವಲಯ ಕಚೇರಿಯ ಉಪ ಆಯುಕ್ತೆ ವೀಣಾ, ಪರಿಸರ ಅಭಿಯಂತರೆ ಮೈತ್ರಿ ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT