ಜಯಪುರ: ಜಯಪುರ ಗ್ರಾಮದ ಬಸ್ ನಿಲ್ದಾಣದ ಮುಂಭಾಗದ ರಸ್ತೆಯು ಸಂಪೂರ್ಣ ಗುಂಡಿ ಬಿದ್ದಿದ್ದು, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಆಯತಪ್ಪಿ ಬಿದ್ದು ಅಪಘಾತಗಳು ಸಂಭವಿಸುತ್ತಿದ್ದವು. ಇತ್ತೀಚೆಗೆ 10ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದರು.