ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಲಸಿನ ಹಬ್ಬ 15ರಿಂದ

Published 13 ಜೂನ್ 2024, 14:50 IST
Last Updated 13 ಜೂನ್ 2024, 14:50 IST
ಅಕ್ಷರ ಗಾತ್ರ

ಮೈಸೂರು: ಸಹಜ ಸಮೃದ್ಧ ಬಳಗ ಮತ್ತು ರೋಟರಿ ಕ್ಲಬ್ ಮೈಸೂರು ಪಶ್ಚಿಮ ಸಹಯೋಗದಲ್ಲಿ ಜೂನ್ 15 ಮತ್ತು 16ರಂದು ನಗರದ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಹಲಸಿನ ಹಬ್ಬ ನಡೆಯಲಿದೆ.

ವಿವಿಧ ತಳಿಗಳ ಹಲಸಿನ ಹಣ್ಣುಗಳ ಜೊತೆಗೆ ಹಲಸಿನಿಂದ ತಯಾರಿಸಿದ ಆಹಾರ ಪದಾರ್ಥಗಳ ಮಾರಾಟ ಇರಲಿದೆ. ತುಮಕೂರಿನ ಹಿರೇಹಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರದವರು ವಿವಿಧ ರೀತಿಯ ಕೆಂಪು ಹಲಸಿನ ತಳಿಗಳನ್ನು ಪ್ರದರ್ಶನಕ್ಕೆ ತರಲಿದ್ದಾರೆ. ಹಲಸಿನ ಸಾಗುವಳಿ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡುತ್ತಾರೆ. ಹಲಸಿನ ಗಿಡಗಳೂ ಮಾರಾಟಕ್ಕೆ ಸಿಗಲಿವೆ.

ಹಲಸು ಬೆಳೆಗಾರ ಕೃಷ್ಣಮೂರ್ತಿ ಬಿಳಿಗೆರೆ ಹಲಸಿನ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಸಾರ್ವಜನಿಕರಿಗಾಗಿ 15ರಂದು ಸಂಜೆ ಹಲಸು ಎತ್ತುವ ಮತ್ತು ಹಲಸಿನ ತೂಕ ಊಹಿಸುವ ಸ್ಪರ್ಧೆ ಇರಲಿದೆ. ಭಾನುವಾರದಂದು ಬೆಳಿಗ್ಗೆ 10.30ಕ್ಕೆ ಮಕ್ಕಳಿಗೆ ‘ನಾ ಕಂಡಂತೆ ಹಲಸು’ ಚಿತ್ರಕಲಾ ಸ್ಪರ್ಧೆ, ಮಧ್ಯಾಹ್ನ ಹಿರಿಯರಿಗಾಗಿ ಹಲಸಿನ ಅಡುಗೆ ಸ್ಪರ್ಧೆ, ಹಲಸಿನ ಹಣ್ಣು ತಿನ್ನುವ ಸ್ಪರ್ಧೆ ನಡೆಯಲಿವೆ ಎಂದು ಪ್ರಕಟಣೆಯು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT