ಮೈಸೂರು: ‘ಈಗ ರಾಜ್ಯಸರ್ಕಾರ ರಾಜನಂತಿದೆ. ನಾವು ಪ್ರಜೆಗಳಾಗಿದ್ದೇವೆ. ಚುನಾವಣೆ ಬಂದರೆ ಎಲ್ಲರೂ ಪ್ರಜೆಗಳಾಗುತ್ತಾರೆ. ಆಗ ಮಾತನಾಡಬಹುದು. ರಾಜ್ಯ ಸರ್ಕಾರ ರಾಜನಂತಾಗಿರುವ ಈ ಹೊತ್ತಿನಲ್ಲಿ ಅವರೊಂದಿಗೆ ಏನು ಮಾತನಾಡುವುದು’ ಎಂದು ಈಶಾ ಫೌಂಡೇಷನ್ನಿನ ಸಂಸ್ಥಾಪಕ ಜಗ್ಗಿ ವಾಸುದೇವ್ ಪ್ರಶ್ನಿಸಿದರು.

ಇಲ್ಲಿನ ಸುತ್ತೂರು ಮಠಕ್ಕೆ ಗುರುವಾರ ಅವರು ಭೇಟಿ ನೀಡಿದ್ದ ವೇಳೆ ಸುದ್ದಿಗಾರರು ಕೇಳಿದ, ‘ತಮಿಳುನಾಡಿನ ದೇವಾಲಯಗಳನ್ನು ಮುಕ್ತಗೊಳಿಸಿ’ (ಫ್ರೀ ಟಿ.ಎನ್ ಟೆಂಪಲ್ಸ್) ಎಂಬ ಆನ್‌ಲೈನ್ ಅಭಿಯಾನವನ್ನು ಕರ್ನಾಟಕದಲ್ಲೇಕೆ ಪ್ರಾರಂಭ ಮಾಡಬಾರದು’ ಎಂಬ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.

ತಮಿಳುನಾಡಿನ 44 ಸಾವಿರ ದೇಗುಲಗಳ ಪೈಕಿ 12 ಸಾವಿರ ದೇಗುಲದಲ್ಲಿ ಒಂದೇ ಒಂದು ಪೂಜೆ ನಡೆದಿಲ್ಲ. 37 ಸಾವಿರ ದೇಗುಲಗಳಲ್ಲಿ ಒಬ್ಬರೇ ಇದ್ದು, ಅವರೇ ಪೂಜೆ ಮತ್ತು ನಿರ್ವಹಣೆ ಮಾಡುತ್ತಿದ್ದಾರೆ. 1,500 ಅಮೂಲ್ಯ ವಿಗ್ರಹಗಳು ಕಾಣೆಯಾಗಿವೆ ಎಂದು ಅಲ್ಲಿನ ಸರ್ಕಾರವೇ ಹೈಕೋರ್ಟ್‌ಗೆ ಮಾಹಿತಿ ಸಲ್ಲಿಸಿದೆ. ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಒಟ್ಟು 9 ಸಾವಿರ ಮೂರ್ತಿಗಳು ಕಳವಾಗಿದ್ದು, ಅವುಗಳ ಜಾಗದಲ್ಲಿ ಹೊಸ ಮೂರ್ತಿ ಇಡಲಾಗಿದೆ ಎಂದು ತಮ್ಮ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಸರ್ಕಾರಗಳು ದೇವಾಲಯವನ್ನು ಒಂದು ವ್ಯವಹಾರವಾಗಿ ನೋಡುತ್ತಿದೆ. ಇದು ಹೀಗೆಯೇ ಮುಂದುವರಿದರೆ ಮುಂದಿನ 50 ವರ್ಷಗಳಲ್ಲಿ ದೇವಾಲಯಗಳೇ ಇಲ್ಲದಿರುವ ಸ್ಥಿತಿ ನಿರ್ಮಾಣವಾಗಬಹುದು. ಹಾಗಾಗಿ, ಆನ್‌ಲೈನ್ ಅಭಿಯಾನ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

‘ಕಾವೇರಿ ಕೂಗು’ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕೋವಿಡ್ ಮಧ್ಯೆಯೂ 1.10 ಕೋಟಿ ಸಸಿಗಳನ್ನು ಕಳೆದ ವರ್ಷ ರೈತರ ಜಮೀನುಗಳಲ್ಲಿ ನೆಡಲಾಯಿತು. ಮುಂದಿನ ವರ್ಷ 3.50 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಸುತ್ತೂರು ಸ್ವಾಮೀಜಿ ಅವರನ್ನು ಭೇಟಿ ಮಾಡಿ ಒಂದು ವರ್ಷವಾಗಿತ್ತು. ಹಾಗಾಗಿ, ಅವರನ್ನು ಭೇಟಿ ಮಾಡಲೆಂದು ಬಂದೆ. ಬೇರೆ ಯಾವುದೇ ಉದ್ದೇಶ ಇದರಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇಲ್ಲಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಜಗ್ಗಿ ವಾಸುದೇವ್, ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಹಾಗೂ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅವರೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಇದನ್ನೂ ಓದಿ... PV Web Exclusive: ಜಾರಕಿಹೊಳಿ ಸಹೋದರರಿಗೆ ಪ್ರತಿಷ್ಠೆಯ ಕಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.