ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಆಗ್ರಹ

Published 11 ಜುಲೈ 2024, 6:33 IST
Last Updated 11 ಜುಲೈ 2024, 6:33 IST
ಅಕ್ಷರ ಗಾತ್ರ

ಮೈಸೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣಕಾಸು ಇಲಾಖೆಯ ನಂಟು ಸ್ಪಷ್ಟವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಆಗ್ರಹಿಸಿದರು.

‘ ವಾಲ್ಮೀಕಿ ನಿಗಮದ ಒಂದು ಬ್ಯಾಂಕ್‌ ಖಾತೆಯಿಂದ ಇನ್ನೊಂದು ಖಾತೆಗೆ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ. ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರು. ಅವರ ಅನುಮತಿ ಇಲ್ಲದೆಯೇ ವರ್ಗಾವಣೆ ಸಾಧ್ಯವೇ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಈ ಹಿಂದೆ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಆರೋಪ ಮುಕ್ತರಾದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲಿ ಎಂದರು.

ಸಿಬಿಐ ತನಿಖೆಗೆ ಒತ್ತಾಯ: ‘ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರಿಗೆ 50:50 ಅನುಪಾತದಲ್ಲಿ ನಿವೇಶನ ಕೊಟ್ಟಿರುವುದು ತಪ್ಪಲ್ಲ. ಆದರೆ ಅಧಿಕಾರಿಗಳು ಸಮಾನಾಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕಿತ್ತು. ಡಿನೋಟಿಫೈ ಮಾಡಲು ಪ್ರಭಾವ, ಜಮೀನಿನ ಅಕ್ರಮ ನೋಂದಣಿ ವಿಚಾರ ನಿಜವೇ ಆಗಿದ್ದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮುಡಾದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT