ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ: ಮುಂದಿನ ತಿಂಗಳಿಂದ ಪ್ರಚಾರ ಮಾಡುವೆ- ದೇವೇಗೌಡ

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ
Last Updated 1 ಡಿಸೆಂಬರ್ 2022, 4:12 IST
ಅಕ್ಷರ ಗಾತ್ರ

ಮೈಸೂರು: 'ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿನಿಂದ ಪ್ರಚಾರಕ್ಕೆ ಹೋಗುತ್ತೇನೆ' ಎಂದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದರು.

ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ತೆರಳಲು ಬಂದಿದ್ದ ಅವರು ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದರು.

'ಚುನಾವಣೆ ‌ಪ್ರಚಾರಕ್ಕೆ ಹೋಗುತ್ತೇನೆ ಎಂಬ ನಂಬಿಕೆ ನನಗಿದೆ' ಎಂದರು.

'ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಪಂಚರತ್ನ ಯಾತ್ರೆಯಲ್ಲಿ ತೊಡಗಿದ್ದಾರೆ. ಯಾತ್ರೆ ಸಾಗುವ ಪ್ರತಿ ಹಳ್ಳಿಯಲ್ಲಿ ನಮ್ಮ ಪಕ್ಷದ ಶಾಸಕರು, ಮುಖಂಡರು, ಮಾಜಿ ಶಾಸಕರು ಒಂದೊಂದು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಮನೆ ಮನೆಗೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ' ಎಂದು ಹೇಳಿದರು.

'ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿ ದಿನ ಪಟ್ಟಿ ಬದಲಾವಣೆ ಆಗುತ್ತದೆ. ಪ್ರತಿ ದಿನ ಸಮೀಕ್ಷೆಯೂ ನಡೆಯುತ್ತಿದೆ. ಅದನ್ನು ಆಧರಿಸಿ ನಿರ್ಧಾರ ಆಗುತ್ತದೆ. ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡರು ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದ್ವಂದ ಇದೆ; ಇನ್ನೂ ಸಮಸ್ಯೆ ಬಗೆಹರಿದಿಲ್ಲ' ಎಂದು ಪ್ರತಿಕ್ರಿಯಿಸಿದರು.

'ಹಾಸನದಲ್ಲಿ ಶಾಸಕ ಪ್ರೀತಂ ಗೌಡನಿಗೆ ಬಿ.ಎಸ್.ಯಡಿಯೂರಪ್ಪ ಸರ್ಕಾರವಿದ್ದಾಗ ಸರ್ವ ಶಕ್ತಿ ಕೊಟ್ಟಿದೆ. ಯಾವ್ಯಾವ ಕೆಲಸ ಕೊಟ್ಟಿದ್ದಾರೆ? ಅದರಿಂದ ಎಷ್ಟು ಹಣ ಸಂಪಾದಿಸಿದ್ದಾರೆ? ಅವರ ಶಕ್ತಿಗೆ ಯಡಿಯೂರಪ್ಪ ಹಾಗೂ ಅವರ ಮಕ್ಕಳೇ ಕಾರಣ. ಅವರಾರ ಹೆದರಿಕೆಗೂ ನಾವು ಬಗ್ಗುವುದಿಲ್ಲ' ಎಂದು ಗುಡುಗಿದರು.

'ಹಾಸನ ಟಿಕೆಟ್‌ಗೆ ಪಕ್ಷದಲ್ಲಿ ಬಹಳ ಮಂದಿ ಆಕಾಂಕ್ಷಿಗಳಿದ್ದಾರೆ. ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಾರೆ' ಎಂದರು.

'ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ'ಎಂದುಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT