ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ರಂಗಕರ್ಮಿ ನಾ. ನಾಗಚಂದ್ರ ಮುಖ್ಯಅತಿಥಿಯಾಗಿದ್ದರು. ಕದಂಬ ಕಲಾಪೀಠದ ಅಧ್ಯಕ್ಷ ಬಿ. ವಿದ್ಯಾಸಾಗರ ಕದಂಬ, ಸ್ಪಂದನ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಟಿ. ಸತೀಶ್ ಜವರೇಗೌಡ, ಉಪನ್ಯಾಸಕ ಧನಂಜಯ ಪಾಲ್ಗೊಂಡಿದ್ದರು.