ಮೈಸೂರು: ಇಲ್ಲಿನ ರಾಮಕೃಷ್ಣ ನಗರದಲ್ಲಿರುವ ಮಂಡ್ಯ ರಮೇಶ್ ನೇತೃತ್ವದ ‘ನಟನ ರಂಗಶಾಲೆ’ಯಲ್ಲಿ ಮಾರ್ಚ್ 26ರಂದು ಸಂಜೆ 6.30ಕ್ಕೆ ವಿಶ್ವ ರಂಗಭೂಮಿ ದಿನದ ಅಂಗವಾಗಿ ‘ಪಯಣ’ ರೆಪರ್ಟರಿ ತಂಡದ ಹೊಸ ಪ್ರಯೋಗ ‘ಕಣಿವೆಯ ಹಾಡು’ ನಾಟಕ ಪ್ರದರ್ಶನಗೊಳ್ಳಲಿದೆ.
ರಚನೆ ಅತೊಲ್ ಫ್ಯೂಗಾರ್ಡ್ ಅವರದ್ದು. ಡಾ.ಮೀರಾ ಮೂರ್ತಿ ಕನ್ನಡಕ್ಕೆ ಅನುವಾದಿಸಿದ್ದು, ಅನುಷ್ ಶೆಟ್ಟಿ ಮತ್ತು ಮುನ್ನ ಮೈಸೂರು ಸಂಗೀತ ಸಂಯೋಜಿಸಿದ್ದಾರೆ. ನಟನದ ಮೇಘ ಸಮೀರ ಮತ್ತು ದಿಶಾ ರಮೇಶ್ ಅಭಿನಯಿಸುತ್ತಿದ್ದು, ರಂಗತಜ್ಞ ಡಾ.ಶ್ರೀಪಾದ ಭಟ್ ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದಾರೆ. ಮೂಲತಃ ದಕ್ಷಿಣ ಆಫ್ರಿಕಾ ನೆಲದ ಕತೆ ಇದು. ತಮ್ಮದೇ ನೆಲದಲ್ಲಿ ಪರಕೀಯರಾಗುತ್ತಾ, ಗುಲಾಮರಾಗುತ್ತಾ ಹೋಗುತ್ತಿರುವ ಮೂಲನಿವಾಸಿಗಳ ಬದುಕಿನ ಚಿತ್ರಣವನ್ನು ಹೊಂದಿದೆ.
ನಾಟಕ ಪ್ರದರ್ಶನಕ್ಕೂ ಮೊದಲು ಸಂಜೆ 4.30ಕ್ಕೆ ಬೆಂಗಳೂರಿನ ಬಹುರೂಪಿ ಪ್ರಕಾಶನ ಪ್ರಕಟಿಸಿರುವ ಡಾ.ಶ್ರೀಪಾದ ಭಟ್ ಅವರ ರಂಗ ಪಯಣದ ಕಥನ ‘ದಡವ ನೆಕ್ಕಿದ ಹೊಳೆ’ ಪುಸ್ತಕದ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಚಲನಚಿತ್ರ ನಟ ಪ್ರಕಾಶ್ ರಾಜ್ ಬಿಡುಗಡೆ ಮಾಡಲಿದ್ದಾರೆ. ರಂಗಕರ್ಮಿ ರಾಮೇಶ್ವರಿ ವರ್ಮ, ನಟ ಬಿ.ಸುರೇಶ್, ಲೇಖಕಿ ದೀಪಾ ಹಿರೇಗುತ್ತಿ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ:7259537777 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.