ಮೈಸೂರು: ‘ಭಾರತೀಯ ಸಾಹಿತ್ಯ ಪರಂಪರೆಯಲ್ಲಿ ಕನ್ನಡದ ಘನತೆ, ಅಸ್ಮಿತೆಯನ್ನು ವರ್ಧಿಸಿದವರು ಕವಿ ಕುವೆಂಪು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.

ಕುವೆಂಪುಗೆ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಲು ಡಿ.12ರಂದು ದೆಹಲಿಯ ಕರ್ನಾಟಕ ಭವನದಲ್ಲಿ ನಡೆಯಲಿರುವ ವಿಚಾರ ಸಂಕಿರಣ, ಪುಸ್ತಕಗಳ ಬಿಡುಗಡೆ, ಸಾಕ್ಷ್ಯಚಿತ್ರ ಪ್ರದರ್ಶನ ಸಮಾರಂಭದ ಪೂರ್ವಭಾವಿಯಾಗಿ ವಿಶ್ವಮಾನವ ಕುವೆಂಪು ಕ್ಷೇಮಾಭಿವೃದ್ಧಿ ಟ್ರಸ್ಟ್ನಿಂದ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ವೈಚಾರಿಕತೆ, ವೈಜ್ಞಾನಿಕತೆ, ಸಾಮರಸ್ಯದ ಅಂಶಗಳು ಕುವೆಂಪು ಸಾಹಿತ್ಯದಲ್ಲಿ ದಟ್ಟವಾಗಿವೆ. ಪ್ರಸ್ತುತ ಜಗತ್ತಿಗೆ ಈ ವಿಚಾರಗಳ ಅಗತ್ಯವಿದೆ. ರಾಜ್ಯ ಸರ್ಕಾರ ಕುವೆಂಪು ಹೆಸರು ಶಿಫಾರಸು ಮಾಡಿರುವುದರಿಂದ ನಮ್ಮ ಹೋರಾಟಕ್ಕೆ ಸಿಂಹಪಾಲು ಶಕ್ತಿ ದೊರೆತಿದೆ. ಕೇಂದ್ರವೂ ಸ್ಪಂದಿಸುವ ಭರವಸೆ ಇದೆ. ಪ್ರಶಸ್ತಿ ದೊರೆತರೆ ಕನ್ನಡ ಸಂಸ್ಕೃತಿ, ಕನ್ನಡಿಗರಿಗೆ ಸಂದ ಗೌರವವಾಗುತ್ತದೆ’ ಎಂದರು.

ವಿಶ್ವಮಾನವ ಕುವೆಂಪು ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಚ್.ಕೆ. ರಾಮು ಮಾತನಾಡಿ, ‘ದೆಹಲಿಯ ಕಾರ್ಯಕ್ರಮಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಲಾಗಿದೆ’ ಎಂದು ತಿಳಿಸಿದರು.

ಸಭೆಯಲ್ಲಿ ಸಾಹಿತಿ ಸಿ.ಪಿ.ಕೃಷ್ಣಕುಮಾರ್, ಮೈಸೂರು ವಿಶ್ವವಿದ್ಯಾಲಯದ ಪ್ರಸಾರಾಂಗ ವಿಶ್ರಾಂತ ನಿರ್ದೇಶಕ ಪ್ರೊ.ಕೆ.ಟಿ.ವೀರಪ್ಪ, ವಿಶ್ರಾಂತ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೇಗೌಡ, ಸಾಹಿತಿಗಳಾದ ಸಿ.ನಾಗಣ್ಣ, ಟಿ.ಸತೀಶ್ ಜವರೇಗೌಡ, ಹಾಲತಿ ಸೋಮಶೇಖರ್, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕಲಪತಿ ಎನ್.ಎಸ್.ರಾಮೇಗೌಡ, ಕೃಷಿ ವಿಜ್ಞಾನಿ ವಸಂತಕುಮಾರ್ ತಿಮಕಾಪುರ, ದಲಿತ ಸಾಹಿತ್ಯ ಅಕಾಡೆಮಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಅವರು ಸಲಹೆ ನೀಡಿದರು.

ಪ್ರಸಾರಂಗದ ನಿರ್ದೇಶಕ ನಂಜಯ್ಯ ಹೊಂಗನೂರು, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಚಂದ್ರಶೇಖರ್, ಕವಿಗಳಾದ ದೇವರಾಜ್ ಚಿಕ್ಕಹಳ್ಳಿ, ರಂಜನ್, ಬಿ.ಬಸವರಾಜು, ಮುಖಂಡರಾದ ಜೆ.ಜವರೇಗೌಡ, ಎಚ್.ಎಲ್.ಯಮುನಾ, ಸುಶೀಲಾ ನಂಜಪ್ಪ, ಮಿರ್ಲೆ ಅಣ್ಣೇಗೌಡ, ವಕೀಲ ಗಂಗಾಧರಗೌಡ ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.