ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ‘ಕನ್ನಡ ನಾಡು ನುಡಿ ಜಾಗೃತಿ ಸಮಿತಿ’ಯ ನೇತೃತ್ವದಲ್ಲಿ ಮೇ 17ರಂದು ಮಂಡ್ಯದಲ್ಲಿ ಹಮ್ಮಿಕೊಂಡಿರುವ ‘ಮೈಸೂರು ವಿಭಾಗಮಟ್ಟದ ಜನಾಂದೋಲನ’ಕ್ಕೆ ಸಾಹಿತಿ ದೇವನೂರ ಮಹಾದೇವ ಬೆಂಬಲ ಸೂಚಿಸಿದ್ದಾರೆ.

ಸಮಿತಿಯ ನಿಯೋಗವು ಇಲ್ಲಿನ ಅವರ ನಿವಾಸದಲ್ಲಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿತು.

‘ಜೋಶಿಯವರು ದುರಾಡಳಿತ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸರ್ವಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಇದೆಲ್ಲ ಕಾರಣದಿಂದ ಅವರ ವಿರುದ್ಧ ಹೋರಾಟ ನಡೆಸಲಾಗುತ್ತಿದೆ’ ಎಂದು ಸಮಿತಿಯವರು ತಿಳಿಸಿದರು. ‘ಇದೆಲ್ಲವನ್ನೂ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಸೂಕ್ತ ಕಾನೂನು ಕ್ರಮ ಆಗುವಂತೆ ಮಾಡಲು ಸಹಕರಿಸಬೇಕು’ ಎಂದು ಕೋರಿದರು.

‘ಇದಕ್ಕೆ ಪ್ರತಿಕ್ರಿಯಿಸಿದ ಮಹಾದೇವ, ಈ ಎಲ್ಲಾ ಬೆಳವಣಿಗೆಗಳು ಮಾಧ್ಯಮದ ಮೂಲಕ ಗೊತ್ತಾಗಿದೆ. ನಿಮ್ಮ ಹೋರಾಟಕ್ಕೆ ನನ್ನ ನೈತಿಕ ಬೆಂಬಲವಿದೆ. ಹೋರಾಟ ಮುಂದುವರಿಯಲಿ. ನಾನೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕ್ರಮ ಜರುಗಿಸುವಂತೆ ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ’ ಎಂದು ಸಮಿತಿಯವರು ಮಾಹಿತಿ ನೀಡಿದ್ದಾರೆ.

ನಿಯೋಗ ತೆರಳಲು ನಿರ್ಧಾರ: ಇದಕ್ಕೂ ಮುನ್ನ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ನಗರದ ಸಾಹಿತಿಗಳು, ಪ್ರಾಧ್ಯಾಪಕರು, ಹೋರಾಟಗಾರರು, ಸಂಘ– ಸಂಸ್ಥೆಗಳ ಪ್ರಮುಖರು, ಮಹೇಶ್ ಜೋಶಿ ವಿರುದ್ಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜೋಶಿ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಲು ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಬೇಕೆಂದು ನಿರ್ಣಯಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.