ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧಕರಿಗೆ ‘ಕನ್ನಡ ಸೇವಾ ರತ್ನ’ ಪ್ರಶಸ್ತಿ ಪ್ರದಾನ

Last Updated 26 ಜನವರಿ 2023, 13:18 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲಾ ಕನ್ನಡ ಚಳವಳಿಗಾರರ ಸಂಘದಿಂದ ನಗರದ ರೋಟರಿ ಕೇಂದ್ರದ ಸಭಾಂಗಣದಲ್ಲಿ ‘ಕನ್ನಡ ಹಬ್ಬ’ ಹಾಗೂ ಸಾಧಕರಿಗೆ ‘ಕನ್ನಡ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಗುರುವಾರ ನಡೆಯಿತು.

ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ‘ಮೈಸೂರು ಕನ್ನಡ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಸಮಾಜಸೇವಕರಾದ ನಟರಾಜ ಜೋಯಿಸ್, ಎಂ.ಪ್ರದೀಪ್‌ಕುಮಾರ್, ಬೂಕನಕೆರೆ ವಿಜೇಂದ್ರ, ಸಾಹಿತ್ಯ ಲೋಕದ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಡಿಎಚ್‌ಒ ಡಾ.ಕೆ.ಎಚ್.ಪ್ರಸಾದ್, ಕನ್ನಡ ಹೋರಾಟಗಾರ್ತಿ ಎಂ.ವಿ.ಶೈಲಜಾ, ಸಿಎಫ್‌ಟಿಆರ್‌ಐ ಕನ್ನಡ ಸಂಘಟನೆಯ ರಂಗಧಾಮಯ್ಯ, ವಿದ್ಯಾರಣ್ಯಪುರಂ ಠಾಣೆ ಎಸ್‌ಐ ಜೆ.ಸಿ.ರಾಜು, ಸಾವಯವ ಕೃಷಿಕ ಚಂದನ್‌ ಗೌಡ, ಬರಹಗಾರ ಕಳಲೆ ಜವರನಾಯಕ, ಬಟ್ಟೆ ವ್ಯಾಪಾರಿ ನಾಗೇಶ್ ಎಲ್.ಕಾಡಯ್ಯ ಹಾಗೂ ಕಾರ್ಮಿಕ ಮುಖಂಡ ಪಿ.ರಾಜು ಅವರಿಗೆ ‘ಕನ್ನಡ ಸೇವಾ ರತ್ನ’ ಪ್ರಶಸ್ತಿ ನೀಡಲಾಯಿತು.

ಸಾಹಿತಿ ಸಿ.ಪಿ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್‌ ಸದಸ್ಯ ಸಿ.ಎನ್.ಮಂಜೇಗೌಡ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ರಾಜ್ಯ ಕಾಂಪೋಸ್ಟ್‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಬಿಜೆಪಿ ಮುಖಂಡ ಎಚ್‌.ವಿ.ರಾಜೀವ್, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಡಾ.ಎಸ್.ಪಿ.ಯೋಗಣ್ಣ, ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್ ಮತ್ತು ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT