ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿಭಾ ಪ್ರದರ್ಶನಕ್ಕೆ ‘ಕಾರಂಜಿ’: ಜನಾರ್ದನ್

Published : 4 ಸೆಪ್ಟೆಂಬರ್ 2024, 13:01 IST
Last Updated : 4 ಸೆಪ್ಟೆಂಬರ್ 2024, 13:01 IST
ಫಾಲೋ ಮಾಡಿ
Comments

ಸಾಲಿಗ್ರಾಮ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ಇದನ್ನು ಬಳಕೆ ಮಾಡಿಕೊಳ್ಳಲು ಪೋಷಕರು ಸಹಕರಿಸಬೇಕು ಎಂದು ಶಿಕ್ಷಣ ಸಂಯೋಜಕ ಜನಾರ್ದನ್ ಮನವಿ ಮಾಡಿದರು.

ತಾಲ್ಲೂಕಿನ ಮಿರ್ಲೆ ಹೋಬಳಿ ಕುಪ್ಪಹಳ್ಳಿ ಕ್ಲಸ್ಟರ್‌ನ ಕೆಂಚನಹಳ್ಳಿ ಸರ್ಕಾರಿ ಶಾಲೆಯಲ್ಲಿ ಬುಧವಾರ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ತನ್ನದೆ ಆದ ಪ್ರತಿಭೆ ಇದ್ದೆ ಇರುತ್ತದೆ. ಇದನ್ನು ಗುರುತಿಸುವ ಜವಾಬ್ದಾರಿ ಶಿಕ್ಷಕ ವೃಂದಕ್ಕೆ ಸೇರಿದ್ದು. ಓದು ಬರಹಕ್ಕೆ  ಎಷ್ಟು ಒತ್ತು ನೀಡಲಾಗುತ್ತದೆಯೋ ಅಷ್ಟೇ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೂ ನೀಡಬೇಕು. ಈ ಬಗ್ಗೆ ಮಕ್ಕಳಿಗೆ ಶಿಕ್ಷಕರು ಪ್ರೇರಣೆ ನೀಡಬೇಕು. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯುತ್ತದೆ ಎಂದರು.

10ಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಿಆರ್‌ಪಿ ವಸಂತಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ, ಮುಖ್ಯಶಿಕ್ಷಕ ಕೃಷ್ಣೇಗೌಡ, ಜಲೇಂದ್ರ, ದಶರಥ, ರಮೇಶ್, ರಾಜಶೇಖರ್, ರಾಘವೇಂದ್ರ, ಶಿವಣ್ಣ, ಶೃತಿ, ಮಹದೇವ್.ಬಿ.ಎಲ್, ಸುಧಾಮಣಿ, ಕವಿತಾ, ಭದ್ರಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT