ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆ: ನಂಜನಗೂಡಿನಲ್ಲಿ ಮೇ 7ರಂದು ಪ್ರಧಾನಿ ಮೋದಿ ಪ್ರಚಾರ

Published 5 ಮೇ 2023, 11:42 IST
Last Updated 5 ಮೇ 2023, 11:42 IST
ಅಕ್ಷರ ಗಾತ್ರ

ಮೈಸೂರು: ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 7ರಂದು ಸಂಜೆ 4ಕ್ಕೆ ನಂಜನಗೂಡು ತಾಲ್ಲೂಕಿನ ಎಲಚಗೆರೆಬೋರೆಯಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯ ಅಂಗವಾಗಿ ಪಕ್ಷದಿಂದ ಆಯೋಜಿಸಿರುವ ಕೊನೆಯ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಲಿದ್ದಾರೆ’ ಎಂದು ಬಿಜೆಪಿ ಮೈಸೂರು ವಿಭಾಗದ ಪ್ರಭಾರಿ ಮೈ.ವಿ.ರವಿಶಂಕರ್ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಪ್ರಧಾನಿಯು ಶಿವಮೊಗ್ಗದ ಕಾರ್ಯಕ್ರಮ ಮುಗಿಸಿ ಇಲ್ಲಿಗೆ ಬರಲಿದ್ದಾರೆ. ವೇದಿಕೆಯಿಂದ ಸುಮಾರು 600 ಮೀಟರ್‌ ದೂರದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಸಭೆಯ ನಂತರ ಅಲ್ಲಿಂದಲೇ ನೇರವಾಗಿ ತೆರಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ನಂಜನಗೂಡಿನಿಂದ 12 ಕಿ.ಮೀ. ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರಿಗೆ 4 ಕಿ.ಮೀ. ದೂರದಲ್ಲಿರುವ ಎಲಚಗೆರೆಬೋರೆಯು ಎರಡೂ ತಾಲ್ಲೂಕುಗಳ ಗಡಿಯಲ್ಲಿದೆ. ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಮೈಸೂರಿನ ಚಾಮರಾಜ, ಕೃಷ್ಣರಾಜ, ನರಸಿಂಹರಾಜ ಮತ್ತು ಚಾಮುಂಡೇಶ್ವರಿ ಕ್ಷೇತ್ರಗಳನ್ನು ಹೊರತುಪಡಿಸಿ, ಮೈಸೂರು ಗ್ರಾಮಾಂತರದ ಏಳು ಕ್ಷೇತ್ರಗಳು, ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಜನರನ್ನು ಪಕ್ಷದ ಕಾರ್ಯಕರ್ತರು ಆಹ್ವಾನಿಸುತ್ತಿದ್ದಾರೆ. ವಿಶೇಷ ಭದ್ರತಾ ಪಡೆ (ಎಸ್‌ಪಿಜಿ)ಯ ನಿರ್ದೇಶನಗಳ ಅನ್ವಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

‘ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ ಎದುರಾಗಿದೆ. ಹೀಗಾಗಿ, ಸಿನಿಮಾ ತಾರೆಯರನ್ನು ಕರೆಸಿ ಪ್ರಚಾರ ಮಾಡಿಸುತ್ತಿದ್ದಾರೆ. ಈ ಬಾರಿ ಅವರು ಸೋಲುವುದು ಖಚಿತ’ ಎಂದರು.

ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಸಹ ವಕ್ತಾರ ಡಾ.ವಸಂತಕುಮಾರ್, ನಗರ ಘಟಕದ ವಕ್ತಾರ ಮಹೇಶ್ ರಾಜೇಅರಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT