ಮೈಸೂರು: ‘ಕಾಂಗ್ರೆಸ್ ಸರ್ಕಾರವು ಮೂರು ವರ್ಷದಲ್ಲಿ 9 ಪ್ರಕರಣಗಳನ್ನು ಎಸ್ಐಟಿ ತನಿಖೆಗೆ ಒಪ್ಪಿಸಿದ್ದು, 8 ಪ್ರಕರಣಗಳ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಬಿಟ್ಕಾಯಿನ್ ಪ್ರಕರಣದಲ್ಲಿ ಮಾತ್ರ ದೋಷಾರೋಪ ಪಟ್ಟಿ ಏಕೆ ಸಲ್ಲಿಕೆಯಾಗಿಲ್ಲ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರಕರಣದಲ್ಲಿ ಬಿಜೆಪಿಗರನ್ನು ಜೈಲಿಗೆ ಕಳುಹಿಸುತ್ತೇವೆಂದು ಕಾಂಗ್ರೆಸ್ಸಿಗರು ಹೇಳಿದ್ದರು. ಈಗ ಜಾರಿ ನಿರ್ದೇಶನಾಲಯವು ಶಾಸಕ ಹ್ಯಾರಿಸ್ ನಲಪಾಡ್ ಅವರ ಮನೆ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ’ ಎಂದರು.

‘ಬಿಟ್ಕಾಯಿನ್ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಕ್ಷಿಸಲು ಸಿ.ಎಂ ಮುಂದಾಗಿದ್ದಾರೆ. ಎಸ್ಐಟಿ ವರದಿ ಬಂದು ವರ್ಷವಾದರೂ ಎಫ್ಐಆರ್ ಏಕೆ ಆಗಿಲ್ಲ? ಮೂರು ದಿನದಲ್ಲಿ ಪ್ರಕರಣ ದಾಖಲಿಸಿ, ಚಾರ್ಜ್ಶೀಟ್ ಸಲ್ಲಿಸಬೇಕು. ತಪ್ಪಿತಸ್ಥರು ಜೆಡಿಎಸ್, ಬಿಜೆಪಿ, ಕಾಂಗ್ರೆಸ್ನ ಯಾರೇ ಆಗಿರಲಿ, ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು’ ಎಂದರು.

‘ಬಿಜೆಪಿಯು ತಪ್ಪಿತಸ್ಥರನ್ನು ರಕ್ಷಿಸುವುದಿಲ್ಲ. 2016–17ರಲ್ಲಿ ಬಿಟ್ಕಾಯಿನ್ ಬಗ್ಗೆ ವಿಚಾರ ಸಂಕಿರಣ ನಡೆಸಿ, ಯುವಕರು ವ್ಯವಹಾರಕ್ಕೆ ಸಿದ್ಧರಾಗಿರಬೇಕೆಂದು ಹೇಳಲಾಗಿತ್ತು. ಬಿಟ್ಕಾಯಿನ್ ಕಾನೂನುಬಾಹಿರವಲ್ಲವೇ? ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ಯಾರ್ಯಾರು ಇದ್ದರೆಂಬುದು ಎಲ್ಲರಿಗೂ ಗೊತ್ತಾಗಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.