ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.17 ಹಾಗೂ 18ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

17ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿಯು ಅವರು, ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳ– ಯುವ ಸಮೃದ್ಧಿ ಸಮ್ಮೇಳನವನ್ನು ಉದ್ಘಾಟಿಸುವರು.

ಮಧ್ಯಾಹ್ನ 3ರ ಸುಮಾರಿಗೆ ತಿ.ನರಸೀಪುರ ಮುಖ್ಯರಸ್ತೆಯ ಇನಾಂಉತ್ತನಹಳ್ಳಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಗರದಲ್ಲೇ ವಾಸ್ತವ್ಯ ಹೂಡುವರು.

18ರಂದು ಬೆಳಿಗ್ಗೆ 11ಕ್ಕೆ ಹುಣಸೂರು ರಸ್ತೆಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಫೋಟೊ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿರುವ ರಾಜ್ಯಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆಯ ‘ಮುಖ್ಯಮಂತ್ರಿ ಕಪ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12ಕ್ಕೆ ನಂಜನಗೂಡು ತಾಲ್ಲೂಕಿನ ಕೆಂಬಾಳು ಗ್ರಾಮದ ಬಳಿ ನಡೆಯಲಿರುವ ‘ಕಬಿನಿ ನೀರು ಸರಬರಾಜು ಯೋಜನೆಯ 2ನೇ ಹಂತದ ಉನ್ನತೀಕರಿಸಿದ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ’ದಲ್ಲಿ ಭಾಗವಹಿಸುವರು.

ಸಂಜೆ 4ಕ್ಕೆ ಮಾನಸಗಂಗೋತ್ರಿಯ ಅಂಬೇಡ್ಕರ್ ಸಂಶೋಧನಾ ವಿಸ್ತರಣ ಕೇಂದ್ರದಿಂದ ವಿಶ್ವಜ್ಞಾನಿ ಸಭಾಂಗಣದಿಂದ ಆಯೋಜಿಸಿರುವ ಕೇಂದ್ರದ ರಜತ ಮಹೋತ್ಸವ ಹಾಗೂ ನೂತನ ಜ್ಞಾನದರ್ಶನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸುವರು. ಸಂಜೆ 7ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.