ಕೆ.ಆರ್.ನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಹಿಂದುಳಿದವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತಿದೆ ಎಂದು ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಅರುಣ್ ಕುಮಾರ್ ಹೇಳಿದರು.

ತಾಲ್ಲೂಕಿನ ಲಾಳಂದೇವನಹಳ್ಳಿಯಲ್ಲಿ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿಯಿಂದ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶೇ 98 ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಗ್ಯಾರಂಟಿ 6ತಿಂಗಳು ನೀಡಲು ಸಾಧ್ಯವಿಲ್ಲ ಎನ್ನುತ್ತಿದ್ದ ಬಿಜೆಪಿಯವರು ಸಹ ಈಗ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಮಾದರಿಯ ಯೋಜನೆಗಳು ಭರವಸೆ ನೀಡುತ್ತಿದ್ದಾರೆ ಎಂದರು.

ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಮಹದೇವ ಮಾತನಾಡಿ, ಕ್ಷೇತ್ರದ ಶಾಸಕ ಡಿ.ರವಿಶಂಕರ್ ಮಾರ್ಗದರ್ಶನದಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಫಲಾನುಭವಿಗಳ ಮನೆಗೆ ಯೋಜನೆಗಳನ್ನು ತಲುಪಿಸುತ್ತಿದ್ದೇವೆ ಎಂದು ಹೇಳಿದರು. 3.54 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಫಲಾನುಭವಿಯಾಗಿದ್ದಾರೆ. ಶೀಘ್ರದಲ್ಲಿಯೇ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವಕುಮಾರ್, ಸದಸ್ಯ ಸಾ.ಮಾ.ಯೋಗೇಶ್, ತಾ.ಪಂ ಇಒ ವಿ.ಪಿ.ಕುಲದೀಪ್ ಮಾತನಾಡಿದರು.

ಸದಸ್ಯರಾದ ಸಯ್ಯದ್ ಜಾಬೀರ್, ಎಂ.ಜೆ.ರಮೇಶ್, ಮಹಾಲಿಂಗಪ್ಪ, ಯತಿರಾಜ್, ಮಹದೇವಸ್ವಾಮಿ, ಮೋಹನ, ಸೋಮಣ್ಣ, ಹೊಸಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಜಯಕುಮಾರ್, ನಿರ್ದೇಶಕ ರಮೇಶ್, ಸಿಡಿಪಿಒ ಸಿ.ಎಂ.ಅಣ್ಣಯ್ಯ, ಸೆಸ್ಕ್ ಎಇಇ ಅರ್ಕೇಶ್ ಮೂರ್ತಿ, ಆಹಾರ ಇಲಾಖೆಯ ಕುಮಾರ್, ಸುರೇಶ್, ಯುವನಿಧಿ ಯೋಜನೆ ಅಧಿಕಾರಿ ರಾಣಿ, ಸಾರಿಗೆ ಸಂಸ್ಥೆಯ ವೆಂಕಟೇಶ್, ಪಿಡಿಒ ಸವಿತಾ, ಕಾರ್ಯದರ್ಶಿ ಧನಂಜಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-38-220264954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.