ಮಂಗಳವಾರ, ಮಾರ್ಚ್ 21, 2023
29 °C

ಮೈಸೂರು | ಕಾಂಗ್ರೆಸ್ ಉಸ್ತುವಾರಿ ಜೊತೆ ಎಚ್‌. ವಿಶ್ವನಾಥ್ ಮಾತುಕತೆ

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕಾಂಗ್ರೆಸ್‌ ಸೇರುವುದಾಗಿ ಈಗಾಗಲೇ ಪ್ರಕಟಿಸಿರುವ ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎ.ಎಚ್.ವಿಶ್ವನಾಥ್ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಅವರೊಂದಿಗೆ ಶುಕ್ರವಾರ ಮಾತುಕತೆ ನಡೆಸಿದ್ದಾರೆ.

‘ಪ್ರಜಾಧ್ವನಿ’ ಸಮಾವೇಶಕ್ಕಾಗಿ ಬಂದು ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಸುರ್ಜೇವಾಲಾ ಜೊತೆ ಚರ್ಚಿಸಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇದ್ದರು. ‍ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಶ್ವನಾಥ್ ಜ.28ರಂದು ಪತ್ರಿಕಾಗೋಷ್ಠಿ ಕರೆದಿದ್ದು ಹೆಚ್ಚಿನ ವಿವರ ನೀಡುವ ನಿರೀಕ್ಷೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು