ಮೈಸೂರು: ‘ಆನ್ಲೈನ್ ಮಾರುಕಟ್ಟೆಯಾದ ಫ್ಲಿಪ್ಕಾರ್ಟ್ನಲ್ಲಿ ಲೀಟರ್ ಹಾಲನ್ನು ₹ 1ಕ್ಕೆ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದು ಹೈನುಗಾರಿಕೆ ಮಾಡುವ ರೈತ ವಿರೋಧಿ ಕ್ರಮವಾಗಿದ್ದು, ಕೂಡಲೇ ನಿರ್ಬಂಧ ವಿಧಿಸಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಚಿಕ್ಕಣ್ಣೇಗೌಡ ಹಾಗೂ ಕಾರ್ಯದರ್ಶಿ ಜಗದೀಶ್ ಸೂರ್ಯ ಆಗ್ರಹಿಸಿದ್ದಾರೆ.

‘ರೈತರು ಜೀವನೋಪಾಯಕ್ಕಾಗಿ ಹೈನುಗಾರಿಕೆ ಅವಲಂಬಿಸಿದ್ದಾರೆ. ಕೆಎಂಎಫ್ ರೈತರಿಗೆ ಉತ್ಪಾದನಾ ವೆಚ್ಚ ನೀಡಲು ಮತ್ತು ಸಂಗ್ರಹಿಸಿದ ಹಾಲು ಮಾರಾಟಕ್ಕೆ ಪ್ರಯಾಸ ಪಡುತ್ತಿರುವಾಗ, ಕೇಂದ್ರ ಸರ್ಕಾರವು ಆನ್ಲೈನ್ ವೇದಿಕೆಗಳಿಗೆ ಅಗ್ಗದ ದರದಲ್ಲಿ ಹಾಲು ಮಾರಾಟಕ್ಕೆ ಅವಕಾಶ ನೀಡಿರುವುದು ಅನ್ಯಾಯವಾಗಿದೆ’ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಬಂಡವಾಳಶಾಹಿ ಮಾರುಕಟ್ಟೆ ವ್ಯವಸ್ಥೆಯು ದೇಶದ ಸಹಕಾರಿ ಒಕ್ಕೂಟಗಳನ್ನು ನಾಶ ಮಾಡುತ್ತಿದೆ. ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು. ಕ್ರಮ ವಹಿಸದಿದ್ದರೆ ಹೈನುಗಾರರು ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.