ಶುಕ್ರವಾರ, ಜನವರಿ 27, 2023
20 °C

ಸಿದ್ದರಾಮಯ್ಯಗೆ ಮತ್ತೆ ಮುಖ್ಯಮಂತ್ರಿ ಆಗುವ ಅವಕಾಶವಿದೆ: ಯತೀಂದ್ರ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಸಿದ್ದರಾಮಯ್ಯ ಅವರಿಗೆ ಮತ್ತೆ ಮುಖ್ಯಮಂತ್ರಿ ಆಗುವ ಅವಕಾಶವಿದೆ’ ಎಂದು ಪುತ್ರ, ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಲ್ಲಿ ಬುಧವಾರ ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿ, ‘ವರುಣಾ ಕ್ಷೇತ್ರವು ಅವರ ಪಾಲಿಗೆ ಅದೃಷ್ಟದ್ದು. ಅಲ್ಲಿಂದ ಗೆದ್ದಿದ್ದಾಗಲೇ ವಿರೋಧಪಕ್ಷದ ನಾಯಕರಾಗಿದ್ದರು. ನಂತರ ಮುಖ್ಯಮಂತ್ರಿಯೂ ಆದರು. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ವರುಣಾಕ್ಕೆ ಬರಲಿ ಎನ್ನುವುದು ನನ್ನ ಆಸೆಯಾಗಿದೆ’ ಎಂದರು.

‘ನನ್ನ ಆಸೆಯನ್ನು ಅಪ್ಪನ ಮುಂದೆ ಹೇಳಿದ್ದೇನೆ. ಅಪ್ಪ ಯಾವ ತೀರ್ಮಾನವನ್ನೂ ಮಾಡಿಲ್ಲ. ಅವರು ವರುಣಾದಿಂದ ಸ್ಪರ್ಧಿಸಿದರೆ ನಾನು ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ನಾನು ಅಪ್ಪನ ಪರವಾಗಿ ಕೆಲಸ ಮಾಡುತ್ತೇನೆ. ಕೋಲಾರ ಸೇರಿದಂತೆ ಹಲವು ಕ್ಷೇತ್ರಗಳು ಅಪ್ಪನಿಗೆ ಸೇಫ್‌ ಇವೆ. ವರುಣಾ ಕ್ಷೇತ್ರಕ್ಕೆ ಬರಲಿ ಎನ್ನುವುದು ನನ್ನ ಮತ್ತು ಪಕ್ಷದ ಕಾರ್ಯಕರ್ತರ ಬಯಕೆಯಾಗಿದೆ’ ಎಂದು ಹೇಳಿದರು.

ಓದಿ... ಶಿಡ್ಲಘಟ್ಟದ ಕಾಂಗ್ರೆಸ್ ಟಿಕೆಟ್ ತ್ಯಾಗಕ್ಕೆ ₹30 ಕೋಟಿ ಆಮಿಷ: ವಿ. ಮುನಿಯಪ್ಪ ಆರೋಪ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು