ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ತಿಕ ಸೋಮವಾರ: ಸಂಭ್ರಮಿಸಿದ ಭಕ್ತರು

Published 11 ಡಿಸೆಂಬರ್ 2023, 14:28 IST
Last Updated 11 ಡಿಸೆಂಬರ್ 2023, 14:28 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ಪಟ್ಟಣದ ಹರವೆ ಮಲ್ಲರಾಜಪಟ್ಟಣ ಸಮೀಪದಲ್ಲಿರುವ ನೂರೊಂದು ಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರ ವಿಶೇಷ ಪೂಜೆ ಸಂಭ್ರಮ ಸಡಗರದಿಂದ ಜರುಗಿತು.

ಅರ್ಚಕರಾದ ಮಲ್ಲಿಕಾರ್ಜುನ್ ಹಾಗೂ ಮಂಜುನಾಥ್ ನೇತೃತ್ವದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಅಭಿಷೇಕದ ನಂತರ ವಿವಿಧ ಬಗೆಯ ಪುಷ್ಪಗಳಿಂದ ದೇವರ ವಿಗ್ರಹಗಳನ್ನು ಅಲಂಕರಿಸಿ ಮಹಾ ಮಂಗಳಾರತಿ ನಡೆಸಿ ನೆರೆದಿದ್ದ ಸಾವಿರಾರು ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ವಿತರಿಸಲಾಯಿತು.

ಪಿರಿಯಾಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತಾದಿಗಳು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಾಲಯ ಭಕ್ತರ ಸಮಿತಿ ವತಿಯಿಂದ ಪ್ರತಿ ವರ್ಷ ಕಡೆ ಕಾರ್ತಿಕ ಸೋಮವಾರದಂದು ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡುವುದು ಅನಾದಿ ಕಾಲದಿಂದ ನಡೆದುಕೊಂಡು ಬಂದ ಪದ್ಧತಿಯಾಗಿದೆ.

ದೇವಾಲಯ ಸಮಿತಿ ಪದಾಧಿಕಾರಿಗಳು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದರು. ದೇವಾಲಯ ಸಮಿತಿ ಪದಾಧಿಕಾರಿಗಳು ಸದಸ್ಯರು ಗ್ರಾಮಸ್ಥರು ಸ್ಥಳೀಯ ಜನಪ್ರತಿನಿಧಿಗಳು ಇದ್ದರು. ತಾಲ್ಲೂಕಿನೆಲ್ಲೆಡೆ ಕಡೆ ಕಾರ್ತಿಕ ಸೋಮವಾರದಂದು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಹಂಚಿಕೆ ಮಾಡುತ್ತಿದ್ದು ಕಂಡು ಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT