ಮೈಸೂರು: ಇಲಾಖೆಗಳ ನಡುವೆ ಸಮನ್ವಯ ಇರಬೇಕು. ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಇಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ನೀರಾವರಿ ಇಲಾಖೆಯ ಅಧಿಕಾರಿಗಳು ನಾಲೆಗಳ ಮೇಲೆ ಸಂಚರಿಸಿ ವಾಸ್ತವ ಸ್ಥಿತಿ ಅರಿಯಬೇಕು. ಕಚೇರಿಯಲ್ಲೇ ಇದ್ದರೆ ಪ್ರಯೋಜನ ಆಗುವುದಿಲ್ಲ ಎಂದರು.
ಕೃಷಿ ಹಾಗೂ ಸಂಬಂಧಿಸಿದ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇದೆ. ಇದು ಮುಂದುವರಿಯಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಮೇಲ್ವಿಚಾರಣೆ ಮಾಡಬೇಕು. ಸಮನ್ವಯ ಇಲ್ಲದಿದ್ದರೆ ಯಾವ ಕಾರ್ಯಕ್ರಮವೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವುದಿಲ್ಲ. ನಿರ್ಲಕ್ಷ್ಯದ ಮನೋಭಾವ ಹೋಗಬೇಕು. ಜಿಲ್ಲಾಧಿಕಾರಿಯಾದವರು ಇದಕ್ಕೆ ಆದ್ಯತೆ ಕೊಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.