ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಂಪೇಗೌಡ ಜಯಂತಿ | ಅರ್ಥಪೂರ್ಣ ಆಚರಣೆ: ಶಿವರಾಜು

Published 14 ಜೂನ್ 2024, 15:11 IST
Last Updated 14 ಜೂನ್ 2024, 15:11 IST
ಅಕ್ಷರ ಗಾತ್ರ

ಮೈಸೂರು: ‘ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂನ್ 27ರಂದು ಬೆಳಿಗ್ಗೆ 11.30ಕ್ಕೆ ನಗರದ ಹುಣಸೂರು ರಸ್ತೆಯ ಕಲಾಮಂದಿರದಲ್ಲಿ ಅರ್ಥಪೂರ್ಣ ಹಾಗೂ ವಿಶೇಷವಾಗಿ ಆಚರಿಸಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಕೆಂಪೇಗೌಡರ ಕೊಡುಗೆ ಹಾಗೂ ಸಾಧನೆಗೆ ಬೆಲೆ ಕಟ್ಟಲು ಆಗುವುದಿಲ್ಲ. ಅವರ ಆದರ್ಶಗಳನ್ನು ಪಾಲಿಸಿ ಅದಕ್ಕೆ ಮೆರುಗು ತರುವಂತೆ ಜಯಂತಿಯನ್ನು ಆಚರಿಸಲಾಗುವುದು’ ಎಂದು ಹೇಳಿದರು.

‘ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕಲಾಮಂದಿರದಲ್ಲಿ ಸ್ವಚ್ಛತೆ, ಕುಡಿಯುವ ನೀರು–ಶಾಮಿಯಾನ ಮೊದಲಾದ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್ ಮಾತನಾಡಿ, ‘ಕಾರ್ಯಕ್ರಮದಲ್ಲಿ ಗೀತ ಗಾಯನ ಏರ್ಪಡಿಸಲಾಗುವುದು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು’ ಎಂದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್‌, ಮುಖಂಡರಾದ ಮೋಹನ್‌ಕುಮಾರ್‌ ಗೌಡ, ಮಹೇಶ್, ಭಾನು ಮೋಹನ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT