ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ ಲಿಂಗಾಯತರಿಗೆ ಒಬಿಸಿ ಮೀಸಲು: ಸುತ್ತೂರು ಶ್ರೀ ಜತೆ ಖಂಡ್ರೆ, ಬಿದರಿ ಚರ್ಚೆ

Last Updated 9 ಅಕ್ಟೋಬರ್ 2022, 13:13 IST
ಅಕ್ಷರ ಗಾತ್ರ

ಮೈಸೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷ ಶಂಕರ ಬಿದರಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಇಲ್ಲಿ ಭಾನುವಾರ ಭೇಟಿಯಾಗಿ ಆಶೀರ್ವಾದ ಪಡೆದರು.

‘ವೀರಶೈವ ಲಿಂಗಾಯತರಿಗೆ ಒಬಿಸಿ ಮೀಸಲಾತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆಗಳ ಬಗ್ಗೆ ಶ್ರೀಗಳೊಂದಿಗೆ ನಡೆಸಿದರು. ಡಿಸೆಂಬರ್ ವೇಳೆಗೆ ಮಹಾಸಭಾದಿಂದ ದಾವಣಗೆರೆಯಲ್ಲಿ 3ಲಕ್ಷಕ್ಕೂ ಹೆಚ್ಚಿನ ಜನರನ್ನು ಸೇರಿಸಿ ಸಮಾವೇಶ ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು’ ಎಂದು ಮೂಲಗಳು ತಿಳಿಸಿವೆ.

ಮಹಾಸಭಾದ ಪದಾಧಿಕಾರಿಗಳಾದ ವರುಣಾ ಮಹೇಶ್, ಹಂದನಹಳ್ಳಿ ಸೋಮಶೇಖರ, ಪ್ರದೀಪ್ ಕುಮಾರ್, ರೇಚಣ್ಣ, ಪ್ರತಿಧ್ವನಿ ಪ್ರಸಾದ್, ಐಲೈಫ್ ಅಧ್ಯಕ್ಷ ಎಚ್.ಎಸ್.ವೀರೇಶ್, ಜಗದೀಶ, ದಯಾನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT