ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಚಿಕ್ಕರಾಚಶೆಟ್ಟಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೊತ್ತೇಗಾಲ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಚಿಕ್ಕರಾಚಶೆಟ್ಟಿ ಅವರನ್ನು ಹೊರತುಪಡಿಸಿ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ, ಬೀಚನಹಳ್ಳಿ ಕಾವೇರಿ ನೀರಾವರಿ ನಿಗಮ ಎಂಜಿನಿಯರ್ ಸಿ.ಗಣೇಶ್ ಆಯ್ಕೆ ಪ್ರಕಟಿಸಿದರು. ಪಿಡಿಒ ನಾಗೇಂದ್ರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.