ಕೆ.ಆರ್.ನಗರ: ‘ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಿಂದ ದೇಶದಲ್ಲಿ ಪ್ರತಿಯೊಬ್ಬರೂ ಗೌರವಯುತವಾದ ಬದುಕು ಕಟ್ಟಿಕೊಂಡಿದ್ದಾರೆ’ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಇಲ್ಲಿನ ಅಂಬೇಡ್ಕರ್ ಅವರ ಪುತ್ಥಳಿಗೆ ಶನಿವಾರ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ವಿವಿಧ ಜಾತಿ, ಧರ್ಮ, ಮತ, ಸಂಸ್ಕೃತಿಯ ಭೇದ ಭಾವವಿಲ್ಲದೇ ಜಾತ್ಯತೀತವಾಗಿ ಸರ್ವರಿಗೂ ಸಲ್ಲುವಂತಹ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದಾರೆ’ ಎಂದರು.

‘ಬಡವರು, ಕಾರ್ಮಿಕರು, ರೈತರು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ. ಕಾನೂನಿನ ಮೂಲಕ ರಕ್ಷಣೆ ಒದಗಿಸಿದ್ದಾರೆ. ಅವರ ತತ್ವಾದರ್ಶ, ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಅವರ ಆಶಯದಂತೆ ಸಮ ಸಮಾಜದ ನಿರ್ಮಾಣಕ್ಕೆ ಕೈಜೋಡಿಸೋಣ’ ಎಂದು ಮನವಿ ಮಾಡಿದರು.

ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ, ತಾ.ಪಂ ಇಒ ಕುಲದೀಪ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಲ್.ಶಂಕರಮೂರ್ತಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡ ಮಹೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸಯ್ಯದ್ ಜಾಬೀರ್, ಪುರಸಭೆ ಮುಖ್ಯಾಧಿಕಾರಿ ರಮೇಶ್, ಮುಖಂಡರಾದ ಎಂ.ಎಚ್.ಸ್ವಾಮಿ, ಡಿ.ಕಾಂತರಾಜ್, ಶಂಕರಸ್ವಾಮಿ, ಕಾಂಗ್ರೆಸ್ ರಾಜ್ಯ ಎಸ್.ಟಿ ಘಟಕದ ಉಪಾಧ್ಯಕ್ಷ ಕಲ್ಲಹಳ್ಳಿ ಶ್ರೀನಿವಾಸ್, ಎಸ್.ಸಿ ಘಟಕದ ಅಧ್ಯಕ್ಷರಾದ ನಂದೀಶ್, ಕಂಠಿಕುಮಾರ್, ಯುವ ಜೆಡಿಎಸ್ ಅಧ್ಯಕ್ಷ ಹಂಪಾಪುರ ಸುರೇಶ್, ಹನಸೋಗೆ ನಾಗರಾಜ್, ಎಂ.ಲೋಕೇಶ್, ಡಿ.ಕೆ.ಕೊಪ್ಪಲು ರಾಜಯ್ಯ, ಎಂ.ಎಸ್.ರವಿಕುಮಾರ್, ಕಳ್ಳಿಮುದ್ದನಹಳ್ಳಿ ಚಂದ್ರು, ಹೆಬ್ಬಾಳು ಮಂಜು, ಬಿ.ಮಂಜುನಾಥ್, ಸುಕೇಶ್, ಬಲರಾಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.