ಕೆ.ಆರ್.ನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಲ್ಲಿನ ಸೆಸ್ಕ್ ಕಚೇರಿ ಮುಂಭಾಗ ರಾಜ್ಯ ರೈತಸಂಘ ತಾಲ್ಲೂಕು ಘಟಕದಿಂದ ಗುರುವಾರ ಪ್ರತಿಭಟನೆ ಮಾಡಲಾಯಿತು.

ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ರೈತ ಮುಖಂಡರು, ಕೃಷಿ ಪಂಪ್ಸೆಟ್ಗಳಿಗೆ ಹಗಲು ವೇಳೆ ಕನಿಷ್ಠ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು, ಕೆಟ್ಟು ನಿಂತಿರುವ ಟ್ರಾನ್ಸ್ಫಾರ್ಮರ್ಗಳನ್ನು ರೈತರಿಂದ ಹಣ ಪಡೆಯದೇ 24 ಗಂಟೆಯೊಳಗೆ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿದರು.

2 ತಿಂಗಳಿಂದ ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗದೇ ಇರುವುದರಿಂದ ಹಣ್ಣು, ತರಕಾರಿ ಬೆಳೆಗಳಿಗೆ ನೀರು ಹಾಯಿಸಲು ಸಾಧ್ಯವಾಗದೇ ಹಾಳಾಗಿವೆ. ಮಳೆ ಬರುವವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಸವಾಗದಂತೆ ಕ್ರಮ ವಹಿಸಬೇಕು. ಎಲ್ಲ ರೈತರು ಸೋಲಾರ್ ಸೌಲಭ್ಯ ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಕೆಲವು ಕಡೆ ವಿದ್ಯುತ್ ತಂತಿ ಜೋತು ಬಿದ್ದಿವೆ, ವಿದ್ಯುತ್ ಕಂಬಗಳು ಶಿಥಿಲಗೊಂಡಿವೆ, ಇದರಿಂದ ರೈತರಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಾರಗೌಡನಹಳ್ಳಿಯಲ್ಲಿ ವಿದ್ಯುತ್ ತಂತಿ ತುಳಿದು ರೈತ ಸಾವನಪ್ಪಿರುವುದು ಇದಕ್ಕೆ ಸಾಕ್ಷಿ. ಇತಂಹ ಅನಾಹುತಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಎಂ.ಎಸ್.ನಟರಾಜು, ರಾಜ್ಯ ಮಹಿಳಾ ಘಟಕ ಕಾರ್ಯದರ್ಶಿ ನೇತ್ರಾವತಿ, ಗೌರವ ಅಧ್ಯಕ್ಷ ಸಿದ್ದೇಗೌಡ, ಮುಖಂಡರಾದ ರೋಹಿತ್, ಕುಮಾರ್, ಜಿ.ಕೆ.ಹರೀಶ್, ಸುಜಾತಾ, ಎ.ಬಿ.ಬಸಪ್ಪ, ಮಹದೇವ್, ಕಾಳೇಗೌಡ, ಕುಬೇರಪ್ಪ, ಬಸಪ್ಪ, ಸೆಸ್ಕ್ ಎಇಇ ಅರ್ಕೇಶಮೂರ್ತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-38-1455590307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.