ಕೆ.ಆರ್.ನಗರ: ಪಟ್ಟಣದ ಬಡಾವಣೆ ಯೊಂದರ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕು ಎಂದು ಆದಿ ಜಾಂಬವ ಸಂಘ ವಿಭಾಗೀಯ ಅಧ್ಯಕ್ಷ ಎಡತೊರೆ ಎಂ.ನಿಂಗರಾಜ್ ಒತ್ತಾಯಿಸಿದರು.

ಇಲ್ಲಿನ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಆದಿ ಜಾಂಬವ ಸಂಘ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ಪರಿಶಿಷ್ಟ ಜಾತಿಗೆ ಸೇರಿದ 35 ವರ್ಷದ ವಿವಾಹಿತ ಮಹಿಳೆಯೊಬ್ಬರ ಮೇಲೆ 20 ದಿನಗಳ ಹಿಂದೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಸಂತ್ರಸ್ತ ಮಹಿಳೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 20 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಚಿಂತಾಜನಕ ಸ್ಥಿತಿಯಲ್ಲಿರುವ ಮಹಿಳೆ ಸಾವು -ಬದುಕಿನ ಮಧ್ಯ ಹೋರಾಟ ಮಾಡುತ್ತಿದ್ದು, ಪ್ರಕರಣ ನಡೆದು 20 ದಿವಸ ಕಳೆದರೂ ಈವರೆಗೂ ಪೊಲೀಸರು ಆರೋಪಿಗಳನ್ನು ಬಂಧಿಸುವ ಕೆಲಸ ಮಾಡಿಲ್ಲ, ನಿರ್ಲಕ್ಷ್ಯ ವಹಿಸಿರುವ ಪೊಲೀಸ್ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ ಈ ಕೂಡಲೇ ಸೇವೆಯಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ಆದಿ ಜಾಂಬವ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಲೋಕೇಶ್ ಮಾತನಾಡಿ, ‘ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮಹಿಳೆಗೆ ಸರ್ಕಾರ ₹50 ಲಕ್ಷ ಪರಿಹಾರ ನೀಡಬೇಕು, ಅವರ ಪುತ್ರನಿಗೆ ಸರ್ಕಾರಿ ಉದ್ಯೋಗ ನೀಡಬೇಕು, ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು, ಕುಟುಂಬಕ್ಕೆ ಪೊಲೀಸ್ ರಕ್ಷಣೆ ಒದಗಿಸಬೇಕು, ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಶಿಕ್ಷೆ ಕೊಡಿಸಬೇಕು’ ಎಂದು ಒತ್ತಾಯಿಸಿದರು.

ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ‘ಈಗಾಗಲೇ ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಮಹಿಳೆಯ ಮನೆಗೆ ತೆರಳಿ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇವೆ. ಅದೇ ದಿನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತೆರಳಿ ಅಲ್ಲಿನ ವೈದ್ಯಾಧಿಕಾರಿಗಳಿಂದ ಮಹಿಳೆಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದಿದ್ದೇವೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ. ಅದರಂತೆ ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ತಾಲ್ಲೂಕು ಆಡಳಿತ ತನ್ನದೇ ಆದ ಮುಂದಿನ ಕ್ರಮ ತೆಗೆದುಕೊಳ್ಳುತ್ತದೆ’ ಎಂದು ಭರವಸೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹದೇವ್, ಪುರಸಭೆ ಮಾಜಿ ಅಧ್ಯಕ್ಷ ಡಿ.ಕಾಂತರಾಜು, ಮಾದರ ಮಹಾಸಭಾ ತಾಲ್ಲೂಕು ಅಧ್ಯಕ್ಷ ನಾಗೇಂದ್ರ, ಡಿಎಸ್ಎಸ್ ಸಂಚಾಲಕ ಎಂ.ಎಸ್.ಮಲ್ಲೇಶ್, ಮುಖಂಡರಾದ ಹಂಪಾಪುರ ಸುರೇಶ್, ಎಂ.ಎಸ್.ರಮೇಶ್, ಪಿ.ಕುಮಾರ್, ಶಂಕರ್, ಸಿದ್ದಾಪುರ ರಮೇಶ್, ಮಹದೇವ್, ಬಿ.ಮಂಜುನಾಥ್, ನಂಜುಂಡಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-38-839660519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.