ಕೆ.ಆರ್.ನಗರ: ಡಾ.ಬಾಬು ಜಗಜೀವನ ರಾಂ ಅವರು ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ಶಾಸಕ ಡಿ.ರವಿಶಂಕರ್ ಸ್ಮರಿಸಿದರು.

ಇಲ್ಲಿನ ಪುರಸಭೆ ವೃತ್ತದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಭಾನುವಾರ ನಡೆದ ಡಾ.ಬಾಬು ಜಗಜೀವನ ರಾಂ ಅವರ 119 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಿರ್ಮಾಣ ಹಂತದಲ್ಲಿರುವ ಇಲ್ಲಿನ ಸಮುದಾಯ ಭವನಕ್ಕೆ ₹50ಲಕ್ಷ ಅನುದಾನ ನೀಡಿ ಶೀಘ್ರ ಪೂರ್ಣಿಗೊಳಿಸಿ ಲೋಕಾರ್ಪಣೆ ಮಾಡಲಾಗುತ್ತದೆ. ಜೊತೆಗೆ ಭವನದ ಉದ್ಘಾಟನೆ ದಿನವೇ ಡಾ.ಬಾಬು ಜಗಜೀವನ ರಾಂ ಅವರ ನೂತನ ಪ್ರತಿಮೆ ಮರು ಸ್ಥಾಪಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉನ್ನತ ಹುದ್ದೆಗಳು ಅಲಂಕರಿಸಿದಾಗ ಮಾತ್ರ ಸಮುದಾಯ ಸದೃಢವಾಗಿ ಬೆಳೆಯಲು ಕಾರಣವಾಗುತ್ತದೆ. ಅದರಂತೆ ಉನ್ನತ ಹುದ್ದೆಗಳನ್ನು ಅಲಂಕರಿಸಲು ಮಕ್ಕಳನ್ನು ಪ್ರೇರೇಪಿಸಬೇಕು ಎಂದರು.

ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಂ.ಶಂಕರಮೂರ್ತಿ, ತಾಲ್ಲೂಕು ಆದಿ ಜಾಂಬವ ಸಂಘದ ಅಧ್ಯಕ್ಷ ಮಧುವನಹಳ್ಳಿ ಎಂ.ಲೋಕೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಮುಖಂಡ ಎಂ.ಎಚ್.ಸ್ವಾಮಿ ಮಾತನಾಡಿದರು.

ಪೊಲೀಸ್ ಇನ್ಸ್ಪೆಕ್ಟರ್ ಎಸ್.ಶಿವಪ್ರಕಾಶ್, ಮುಖಂಡರಾದ ಜಿ.ಆರ್.ರಾಮೇಗೌಡ, ಕೋಳಿ ಪ್ರಕಾಶ್, ಮಿಕ್ಸರ್ ಶಂಕರ್, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ನಗರ ಯೋಜನಾ ಪ್ರಾದಿಕಾರದ ಅಧ್ಯಕ್ಷ ಗಡ್ಡ ಮಹೇಶ್, ನಿರ್ದೇಶಕ ಸಯ್ಯದ್ ಜಾಬೀರ್, ಎಂಎಸ್ಎಸ್ ತಾಲ್ಲೂಕು ಅಧ್ಯಕ್ಷ ಎಂ.ಎಸ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಎಚ್.ಕುಮಾರ್, ಖಜಾಂಚಿ ಎಚ್.ಎಂ.ಮಂಜು, ಮಾದಿಗ ದಂಡೋರ ತಾಲೂಕು ಅಧ್ಯಕ್ಷ ಎಂ.ಎಸ್.ನಂಜುಂಡಸ್ವಾಮಿ, ದಸಂಸ ತಾಲ್ಲೂಕು ಅಧ್ಯಕ್ಷ ಎಂ.ಎಸ್.ಮಲ್ಲೇಶ್, ಮುಖಂಡರಾದ ಎಂ.ಜೆ.ಕುಮಾರ್, ಕಲ್ಲಹಳ್ಳಿ ಶ್ರೀನಿವಾಸ್, ನವೀದ್, ಎಂ.ಟಿ.ರಾಜೇಶ್, ಆದರ್ಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-38-1343999852

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.