ಕೆ.ಆರ್.ನಗರ: ಇಲ್ಲಿನ ಬಸವೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ಉಪ್ಪಾರ ಸಮುದಾಯ ಭವನ ಪೂರ್ಣಗೊಳಿಸಲು ಅಗತ್ಯ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.

ತಾಲ್ಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಭಗೀರಥ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಉಪ್ಪಾರರ ಸಂಘಕ್ಕೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ಕೇಂದ್ರದಲ್ಲಿ ಸರ್ಕಾರಿ ನಿವೇಶನ ಗುರುತಿಸಿ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸಮುದಾಯದ ಮುಖಂಡರಿಗೆ ಪುರಸಭೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಹಶೀಲ್ದಾರ್ ಜಿ.ಸುರೇಂದ್ರಮೂರ್ತಿ,ಶಿಕ್ಷಕ ಮಂಜುನಾಥ್, ಉಪ್ಪಾರರ ಸಂಘದ ಅಧ್ಯಕ್ಷ ಕಾಟ್ನಾಳು ಮಹದೇವ್, ನಗರ ಘಟಕ ಅಧ್ಯಕ್ಷ ಟಿ.ಕೃಷ್ಣ, ಮುಖಂಡರಾದ ಎಂ.ಎಸ್. ಮಹದೇವ್, ಸಯ್ಯದ್ ಜಾಬೀರ್, ಜೆ.ಎಂ.ಕುಮಾರ್, ಕೇಶವಮೂರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-39-1283512865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.