ಕೆ.ಆರ್.ನಗರ: ದಲಿತರ ಕೇರಿಯಲ್ಲಿ ಮಹದೇಶ್ವರ ದೇವರ ಉತ್ಸವಮೂರ್ತಿಯನ್ನು ಮೆರವಣಿಗೆ ಮಾಡದೆ, ಪೂಜೆ ಸಲ್ಲಿಸಲೂ ಅವಕಾಶ ನೀಡದ್ದರಿಂದ ತಾಲ್ಲೂಕಿನ ಮಾರ್ಚಹಳ್ಳಿಯಲ್ಲಿ ವಾತಾವರಣ ಉದ್ವಿಗ್ನಗೊಂಡಿತ್ತು. ಶುಕ್ರವಾರ ತಹಶೀಲ್ದಾರ್ ಅವರ ಮಧ್ಯಪ್ರವೇಶದಿಂದ, ದಲಿತರ ಬೀದಿಯಲ್ಲೂ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು.

‘ಉತ್ಸವಮೂರ್ತಿಯನ್ನು ನಮ್ಮ ಬೀದಿಯಲ್ಲಿ ಮೆರವಣಿಗೆ ಮಾಡದೆ ತಾರತಮ್ಯ ಎಸಗಲಾಗುತ್ತಿದೆ’ ಎಂದು ಆರೋಪಿಸಿ ದಲಿತ ಮುಖಂಡರು ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನದ ಎದುರು ಪ್ರತಿಭಟಿಸಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಜಿ.ಸುರೇಂದ್ರ ಮೂರ್ತಿ ಹಾಗೂ ಡಿವೈಎಸ್ಪಿ ಟಿ.ಬಿ.ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಂಕರಮೂರ್ತಿ ಗ್ರಾಮದ ಎಲ್ಲ ಸಮುದಾಯಗಳ ಮುಖಂಡರ ಮನವೊಲಿಸಿದರು.

ಹುಣಸೂರು ತಾಲ್ಲೂಕಿನ ಕೊಮ್ಮೇಗೌಡನ ಕೊಪ್ಪಲು ಗ್ರಾಮಕ್ಕೆ ಹಿಂದಿರುಗಿದ್ದ ಉತ್ಸವಮೂರ್ತಿಯನ್ನು ವಾಪಸ್ ಗ್ರಾಮಕ್ಕೆ ಕರೆತಂದು ದಲಿತರ ಕೇರಿಯಲ್ಲಿ ಮೆರವಣಿಗೆ ನಡೆಸಿ, ಮನೆಗಳಲ್ಲಿ ಪೂಜೆ ಸಲ್ಲಿಸಲು ಅನುವು ಮಾಡಿಕೊಡಲಾಯಿತು. ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಲಾಯಿತು. ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

‘ಗ್ರಾಮದಲ್ಲಿ ಕಳೆದ ವಾರ ಮಹದೇಶ್ವರ ಜಾತ್ರೆ ನಡೆದಿತ್ತು. ಆಗ ಉತ್ಸವಮೂರ್ತಿ ಮೆರವಣಿಗೆಯು ಎಲ್ಲ ಬೀದಿಗಳಲ್ಲೂ ಸಂಚರಿಸಿತ್ತು. ಆದರೆ, ದಲಿತರ ಬೀದಿಗೆ ಬಂದಿರಲಿಲ್ಲ. ದೇವಸ್ಥಾನದ ಗರ್ಭಗುಡಿ ಪ್ರವೇಶಿಸುವಂತಿರಲಿಲ್ಲ. ಅದನ್ನು ಪ್ರಶ್ನಿಸಿದಾಗ ಕೆಲವರು ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ದಲಿತ ಯುವಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-38-1709666806

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.