ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) 17ನೇ ಘಟಿಕೋತ್ಸವ ಸೋಮವಾರ ನಡೆಯಿತು.

ಮುಕ್ತಗಂಗೋತ್ರಿ ಆವರಣದಘಟಿಕೋತ್ಸವ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದವಿ ಪ್ರದಾನ ಮಾಡಿದರು.

2018–19 ಮತ್ತು 2019–20ರ ಬ್ಯಾಚ್‌ನ 8,338 ಅಭ್ಯರ್ಥಿಗಳಿಗೆ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು. ಉತ್ತಮ ಸಾಧನೆ ತೋರಿದ ಅಭ್ಯರ್ಥಿಗಳಿಗೆ 48 ಚಿನ್ನದ ಪದಕ, 38 ನಗದು ಬಹುಮಾನಗಳನ್ನು ನೀಡಲಾಯಿತು. 31 ಅಭ್ಯರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.

ಮೂವರಿಗೆ ಗೌರವ ಡಾಕ್ಟರೇಟ್: ಬೆಂಗಳೂರಿನ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಆರ್.ವಿ.ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಿಸಿಎಸ್ ಉಪಾಧ್ಯಕ್ಷ ಇ.ಎಸ್.ಚಕ್ರವರ್ತಿ ಹಾಗೂ ವಿಆರ್‌ಎಲ್ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕ (ತಾಂತ್ರಿಕ) ಎ.ಬಿ ಬಸವರಾಜು ಘಟಿಕೋತ್ಸವ ಭಾಷಣ ಮಾಡಿದರು.

ಕೆಎಸ್‌ಒಯುಕುಲಪತಿ ಡಾ.ಎಸ್.ವಿದ್ಯಾಶಂಕರ್, ಕುಲಸಚಿವ ಡಾ.ಆರ್.ರಾಜಣ್ಣ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.