ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಕ್ತ ವಿ.ವಿ. ಹಗರಣ: ಸಿಬಿಐ ತನಿಖೆ ಆರಂಭ?

Published 12 ಜುಲೈ 2023, 15:11 IST
Last Updated 12 ಜುಲೈ 2023, 15:11 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2009–10 ಹಾಗೂ 2015–16ನೇ ಸಾಲಿನಲ್ಲಿ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಸದ್ಯದಲ್ಲಿಯೇ ಅಧಿಕಾರಿಗಳ ತಂಡವು ತನಿಖೆಗೆಂದು ಮೈಸೂರಿಗೆ ಬರುವ ನಿರೀಕ್ಷೆ ಇದೆ.

ಅಧ್ಯಯನ ಕೇಂದ್ರಗಳ ಸ್ಥಾಪನೆ, ಪರೀಕ್ಷೆ ಸೇರಿದಂತೆ ವಿವಿಧ ವಿಷಯಗಳಲ್ಲಿ ₹250 ಕೋಟಿಯಷ್ಟು ಹಣ ದುರ್ಬಳಕೆ ಆಗಿರುವ ಆರೋಪಗಳ 2022ರ ಫೆಬ್ರುವರಿಯಲ್ಲಿ ವಿ.ವಿ. ಕುಲಸಚಿವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ನಂತರ ನಡೆದ ಮುಕ್ತ ವಿ.ವಿ.ಯ ಆಡಳಿತ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆಗೆ ನಿರ್ಣಯಿಸಿದ್ದು, ರಾಜ್ಯಪಾಲರಿಗೆ ವರದಿ ನೀಡಿತ್ತು. ಆ ವರದಿಯನ್ನು ಆಧರಿಸಿ ರಾಜ್ಯಪಾಲರು ಸರ್ಕಾರಕ್ಕೆ ತನಿಖೆಗೆ ಶಿಫಾರಸು ಮಾಡಿದ್ದರು. ಅದರಂತೆ ಸರ್ಕಾರವು 2022ರ ಏಪ್ರಿಲ್‌ನಲ್ಲಿ ಸಿಬಿಐ ತನಿಖೆಗೆ ಆದೇಶಿಸಿತ್ತು.

ಈ ವರ್ಷ ಮಾರ್ಚ್‌ನಲ್ಲಿ ಸಿಬಿಐ ತಂಡವು ಪ್ರಕರಣದ ತನಿಖೆ ವಹಿಸಿಕೊಂಡಿದೆ ಎಂದು ಹೇಳಲಾಗಿದೆ. ಸಂಬಂಧಿಸಿದ ಅಧಿಕಾರಿಗಳು, ಲೆಕ್ಕಪರಿಶೋಧಕರು, ಬ್ಯಾಂಕುಗಳಿಗೂ ನೋಟಿಸ್‌ ನೀಡಿದ್ದು, ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಕೆಎಸ್ಒಯು ಕುಲಸಚಿವ ಕೆಎನ್‌ಎನ್‌ ಮೂರ್ತಿ ‘ ಸಿಬಿಐ ತನಿಖೆ ಸಂಬಂಧ ಈವರೆಗೆ ಯಾವುದೇ ಮಾಹಿತಿ, ನೋಟಿಸ್ ಬಂದಿಲ್ಲ. ಬಂದಲ್ಲಿ ಅಗತ್ಯ ಮಾಹಿತಿ ಒದಗಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT