ಮೈಸೂರು: ‘ಉನ್ನತ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಬಗ್ಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಹೇಳಿದರು.

ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ರಾಜ್ಯ ಸರ್ಕಾರದ ರದ್ದು ಆದೇಶ ಧಿಕ್ಕರಿಸಿ ನಡೆಯುತ್ತಿರುವ ‘ಏಕಾತ್ಮ ಮಾನವ ದರ್ಶನ ಸಮ್ಮೇಳನ’ದಲ್ಲಿ ಗುರುವಾರ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ರಾಜ್ಯಪಾಲರು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದಾರೆ. ಅವರ ಗಮನಕ್ಕೆ ತರುವುದೂ ಮುಖ್ಯ. ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿದ್ದರಿಂದ ದೈನಂದಿನ ಆಡಳಿತ ನಡೆಸುವುದು ಕಷ್ಟವಾಗುತ್ತಿದೆ. ತಿಂಗಳಾಂತ್ಯವಾಗಿದ್ದು ಸಿಬ್ಬಂದಿಗೆ ಸಂಬಳ ನೀಡಬೇಕು ಮತ್ತು ಇತರ ಖರ್ಚುಗಳೂ ಇವೆ’ ಎಂದರು.

ಎರಡನೇ ದಿನವೂ ಸಮ್ಮೇಳನ ಸುಸೂತ್ರ: ರಾಜ್ಯ ಸರ್ಕಾರದ ರದ್ದು ಆದೇಶದ ನಡುವೆಯೂ ಎರಡನೇ ದಿನವೂ ಸಮ್ಮೇಳನವು ನಿರಾತಂಕವಾಗಿ ನಡೆಯಿತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಭೆ ನಡೆಸಿದರು. ರಾಷ್ಟ್ರೀಯ ಶಿಕ್ಷಣ ನೀತಿ– 2020 ಅನ್ನು ಸಮರ್ಥವಾಗಿ ಅನುಷ್ಠಾನಗೊಳಿಸಬೇಕೆಂಬ ಸೂಚನೆಯನ್ನು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.