ಮೈಸೂರು: ಕೆಎಸ್ಆರ್ಟಿಸಿ ಬಸ್ ಪ್ರಯಾಣದರ ಏರಿಕೆಗೆ ಎಸ್ಡಿಪಿಐ ತೀವ್ರ ಖಂಡನೆ ವ್ಯಕ್ತಪಡಿಸಿದೆ.

‘ಈ ಬಸ್ಗಳ ಪ್ರಯಾಣ ದರವನ್ನು ಶೇ 15ರಷ್ಟು ಏರಿಕೆ ಮಾಡಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಖಂಡನೀಯ. ಇದೊಂದು ದೊಡ್ಡ ಅನ್ಯಾಯ. ಇದರಿಂದ ಜನಸಾಮಾನ್ಯರು, ವಿಶೇಷವಾಗಿ ಕಾರ್ಮಿಕ ವರ್ಗ, ವಿದ್ಯಾರ್ಥಿಗಳು ಮತ್ತು ಕೈಗೆಟುಕುವ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ದೈನಂದಿನ ಪ್ರಯಾಣಿಕರಿಗೆ ದೊಡ್ಡ ಹೊರೆಯಾಗಲಿದೆ’ ಎಂದು ಕಳವಳ ವ್ಯಕ್ತಪಡಿಸಿದೆ.

‘ಇಂಧನ ಬೆಲೆ ಏರಿಕೆ, ಸಿಬ್ಬಂದಿ ಹಾಗೂ ನಿರ್ವಹಣಾ ವೆಚ್ಚಗಳಲ್ಲಿನ ಏರಿಕೆಯ ಕಾರಣ ನೀಡಿ ರಾಜ್ಯ ಸರ್ಕಾರ ಈ ಹೆಚ್ಚಳವನ್ನು ಸಮರ್ಥಿಸಿಕೊಂಡಿದೆ. ಆದರೆ ,ಈ ನಿರ್ಧಾರದಿಂದ ಜನಸಾಮಾನ್ಯರ ಮೇಲೆ ದೊಡ್ಡ ಹೊರೆ ಬೀಳಲಿದೆ ಎಂಬುದು ಸ್ಪಷ್ಟವಾಗಿದೆ. ಕರ್ನಾಟಕದ ಜನರು ಈಗಾಗಲೇ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಜೀವನ ನಿರ್ವಹಣಾ ವೆಚ್ಚಗಳಿಂದ ಹೆಣಗಾಡುತ್ತಿದ್ದಾರೆ. ಅದರ ಜೊತೆಗೆ ಈ ಬೆಲೆ ಏರಿಕೆ ಅವರನ್ನು ಆರ್ಥಿಕವಾಗಿ ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.

‘ಈಗ ಅತ್ಯಧಿಕ ಬಸ್ ಪ್ರಯಾಣಿಕರು ಪುರುಷರೇ ಆಗಿದ್ದು, ಅವರು ಈ ದರ ಹೆಚ್ಚಳದ ಭಾರವನ್ನು ಹೊರಬೇಕಾಗಿದೆ. ಈ ನಿರ್ಧಾರ ಆರ್ಥಿಕವಾಗಿ ಅನ್ಯಾಯದ ಏರಿಕೆ ಮಾತ್ರವಲ್ಲದೆ ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತದೆ. ಸರ್ಕಾರ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಜನರ ಮೇಲೆ ಅನಗತ್ಯ ಹೊರೆಯನ್ನು ಹಾಕದೆ ಸಾರಿಗೆ ಕ್ಷೇತ್ರದ ಆರ್ಥಿಕ ಕೊರತೆಯನ್ನು ನಿರ್ವಹಿಸಲು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.