ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಕೆ.ಟಿ. ಶ್ರೀಕಂಠೇಗೌಡ ಆಗ್ರಹ

Published 8 ಜುಲೈ 2024, 15:21 IST
Last Updated 8 ಜುಲೈ 2024, 15:21 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಶಿಫಾರಸನ್ನು ಕೂಡಲೇ ಜಾರಿಗೊಳಿಸಿ ಸರ್ಕಾರಿ ನೌಕರರಿಗೆ ನೆರವಾಗಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಒತ್ತಾಯಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಕೇಂದ್ರ ಸರ್ಕಾರಿ ನೌಕರರ ವೇತನಕ್ಕೂ ರಾಜ್ಯದ ನೌಕರರ ವೇತನಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಹೀಗಾಗಿ ಈ ತಾರತಮ್ಯವನ್ನು ಹೋಗಲಾಡಿಸಬೇಕು’ ಎಂದು ಕೋರಿದರು.

‘ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ಜಾರಿಯಲ್ಲಿದ್ದು, ಇದನ್ನು ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್‌) ಜಾರಿಗೊಳಿಸಬೇಕು. ವಿಧಾನಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ನೀಡಿದ್ದ ಭರವಸೆಯನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು. 

‘ಖಾಸಗಿ ಶಾಲಾ– ಕಾಲೇಜುಗಳಿಗೆ 1995ರಿಂದ ಕನಿಷ್ಠ 10 ವರ್ಷಗಳವರೆಗಿನ ಅನುದಾನವನ್ನು ಒದಗಿಸಬೇಕು. ಅಲ್ಲಿನ ನೌಕರರ ಜೀವನ ಭದ್ರತೆಗೆ ನಾಂದಿ ಹಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ಉಮೇಶ್, ಲೋಕೇಶ್, ಎಂ.ಎಂ. ಮಹದೇವ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT