ಮೈಸೂರು: ಕುಕ್ಕರಹಳ್ಳಿ ಕೆರೆ ಹಾಗೂ ಸುತ್ತಲಿನ ಪರಿಸರವನ್ನು ಸಂರಕ್ಷಿಸಬೇಕು. ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ಸದಸ್ಯರು ಕುಕ್ಕರಹಳ್ಳಿ ಕೆರೆ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಕುಕ್ಕರಹಳ್ಳಿ ಕೆರೆಯು ಜೀವ ವೈವಿಧ್ಯದ ತಾಣವಾಗಿದೆ. ನೂರಾರು ಮಂದಿ ಇಲ್ಲಿ ನಿತ್ಯ ವಾಯುವಿಹಾರಕ್ಕೆ ಬರುತ್ತಾರೆ. ಹೀಗಿರುವಾಗ ಇಲ್ಲಿ ಉದ್ಯಾನಕ್ಕೆಂದು ಇದ್ದ ಸುಮಾರು 2 ಎಕರೆ 20 ಗುಂಟೆಯಷ್ಟು ಪ್ರದೇಶವನ್ನು ಮುಡಾ ವಾಣಿಜ್ಯ ವಲಯಕ್ಕೆ ಬದಲಿಸಿಕೊಟ್ಟಿದೆ. ಖಾಸಗಿ ವ್ಯಕ್ತಿಗಳು ಬೇಲಿ ಹಾಕಿಕೊಂಡಿದ್ದು, ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಯೋಜನೆ ನಡೆದಿದೆ’ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.

‘ರಾಷ್ಟ್ರಕವಿ ಕುವೆಂಪು ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾಗ ಮಾನಸಗಂಗೋತ್ರಿ ಆವರಣದೊಂದಿಗೆ ಈ ಕೆರೆಯನ್ನೂ ಅಭಿವೃದ್ಧಿ ಪಡಿಸಿದ್ದು, ಅವರ ಹೆಸರಿನ ಒಂದು ಉದ್ಯಾನ ಇದೆ. ಈ ಪ್ರದೇಶ ಮೈಸೂರು ವಿಶ್ವವಿದ್ಯಾಲಯದ ಆವರಣಕ್ಕೆ ಹೊಂದಿಕೊಂಡಿದೆ. ಇಲ್ಲಿನ ಕೆರೆ ದೇಶ-ವಿದೇಶಗಳ ಅಪರೂಪದ ಪಕ್ಷಿಗಳಿಗೆ ಆಶ್ರಯ ತಾಣವಾಗಿದೆ. ಇಂತಹ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಸರಿಯಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

‘ಕೆರೆ ಪ್ರದೇಶದಲ್ಲಿ ಯಾವುದೇ ರೀತಿಯ ವಾಣಿಜ್ಯ ಮತ್ತು ಬಹುಮಹಡಿ ಕಟ್ಟಡ ನಿರ್ಮಿಸಬಾರದು. ಇಲ್ಲಿನ ಪರಿಸರ ರಕ್ಷಿಸಬೇಕು. ಇಲ್ಲವಾದರೆ ಪರಿಸರವಾದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಹೋರಾಟಗಾರರಾದ ಭಾನು ಮೋಹನ್, ಅರವಿಂದ್ ಶರ್ಮ, ಕೆರೆ ಜಯರಾಮಯ್ಯ, ಸೋಸಲೆ ಸಿದ್ದರಾಜು, ಪಿ.ಎಸ್. ನಟರಾಜು ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.