ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕುಮಾರವ್ಯಾಸ– ಕನ್ನಡ ಮಹಾಭಾರತ’ ಬಿಡುಗಡೆ 9ಕ್ಕೆ

Published 4 ಜನವರಿ 2024, 15:34 IST
Last Updated 4 ಜನವರಿ 2024, 15:34 IST
ಅಕ್ಷರ ಗಾತ್ರ

ಮೈಸೂರು: ನಗರದ ಮೈಸೂರು ವಿಶ್ವವಿದ್ಯಾಲಯದ ಇಂಗ್ಲಿಷ್‌ ವಿಭಾಗದ ಎಂ.ಎ. ಸೀನಿಯರ್‌ ಸಭಾಂಗಣದಲ್ಲಿ ಜ.9ರಂದು ಬೆಳಿಗ್ಗೆ 10.30ಕ್ಕೆ ‘ಕುಮಾರವ್ಯಾಸ– ಕನ್ನಡ ಮಹಾಭಾರತ’ (ಇಂಗ್ಲಿಷ್‌ ಅನುವಾದ) ಪುಸ್ತಕ ಬಿಡುಗಡೆ ನಡೆಯಲಿದೆ.

ಅಮೆರಿಕದ ಹಾರ್ವರ್ಡ್‌ ವಿಶ್ವವಿದ್ಯಾಲಯ ಕೃತಿಯನ್ನು ಪ್ರಕಟಿಸಿದ್ದು, ಪ್ರೊ.ಸಿ.ಎನ್‌.ರಾಮಚಂದ್ರನ್‌ ಹಾಗೂ ಪ್ರೊ.ನಾರಾಯಣ ಹೆಗ್ಡೆ ಅನುವಾದ ಮಾಡಿದ್ದಾರೆ.

ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎನ್‌.ಕೆ.ಲೋಕನಾಥ್ ಪುಸ್ತಕ ಬಿಡುಗಡೆ ಮಾಡುವರು. ಸಂಪಾದಕ ಪ್ರೊ.ಎಸ್‌.ಎನ್‌.ಶ್ರೀಧರ್‌, ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಎಚ್‌.ಎಸ್‌.ಶಿವಪ್ರಕಾಶ್‌, ವಿಭಾಗದ ಮುಖ್ಯಸ್ಥ ಪ್ರೊ.ಕೆ.ಸದಾಶಿವ, ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೃಷ್ಣಮೂರ್ತಿ ಹನೂರು ಉಪಸ್ಥಿತರಿರುವರು ಎಂದು ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT