ಸರಗೂರು: ಕುವೆಂಪು ಅವರ ಪುಸ್ತಕಗಳನ್ನು ಯುವಪೀಳಿಗೆ ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ’ ಎಂದು ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನಿವೃತ್ತ ರಾಜ್ಯ ನಿರ್ದೇಶಕ ಎಂ.ಎನ್. ನಟರಾಜು ಅಭಿಪ್ರಾಯಪಟ್ಟರು.

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸರಗೂರು ಘಟಕ ಕನ್ನಡ ಸಾಹಿತ್ಯ ಪರಿಷತ್ ಸಹದೊಂದಿಗೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ವಿಶ್ವಮಾನವ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಜಾತಿ–ಮತಗಳನ್ನು ಬಹಿಷ್ಕರಿಸುವ ಬಸವ, ಬುದ್ಧ, ಅಂಬೇಡ್ಕರ್ ಅವರ ವಿಚಾರಗಳನ್ನು ಹೊಸ ರೂಪದಲ್ಲಿ ಕುವೆಂಪು ಅವರು ನಾಡಿಗೆ ಪರಿಚಯಿಸಿದ್ದು, ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ, ಆದರ್ಶಗಳು ಸರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ’ ಎಂದರು.

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪಿ.ರವಿ ಮಾತನಾಡಿ, ‘ಮಾನವ ತನ್ನ ಮನಸ್ಸನ್ನು ವಿಶ್ವದಷ್ಟು ವಿಶಾಲವಾಗಿ ಇಟ್ಟುಕೊಳ್ಳಬೇಕು. ಹೃದಯವಂತಿಕೆ ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎನ್ನುವುದನ್ನು ತಮ್ಮ ಕಾವ್ಯಗಳ ಮೂಲಕ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದರು’ ಎಂದು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ‘ವ್ಯಕ್ತಿ ಹುಟ್ಟುವಾಗ ವಿಶ್ವಮಾನವನಾಗಿದ್ದು, ಬೆಳೆಯುತ್ತಾ ಅಲ್ಪಮಾನವನಾಗುತ್ತಾನೆ. ಹೀಗಾಗಿ ಭಾಷೆ, ಪ್ರದೇಶ, ನಾಡು-ನುಡಿಗಳ ಮೇಲೆ ಅಭಿಮಾನವಿಟ್ಟು ಮತ್ತೆ ವಿಶ್ವಮಾನವರಾಗಬೇಕಾಗಿದೆ ಎಂದು ಕುವೆಂಪು ಪ್ರತಿಪಾದಿಸಿದ್ದರು. ಅದನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಎಂಎಂಕೆ ಕಾಲೇಜಿನ ಉಪನ್ಯಾಸಕ ಸಿದ್ದಾರ್ಥ್, ಶಾಂತಿಪುರ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ಎಚ್.ಎಸ್. ಶರತ್, ಪಟ್ಟಣ ಪಂಚಾಯತಿ ಸದಸ್ಯ ಶ್ರೀನಿವಾಸ್, ಸರಗೂರು ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಎಸ್.ಎನ್. ಸುಧೀರ್, ಗ್ರಾಮೀಣ ಮಹೇಶ್, ಮಾತನಾಡಿದರು. ಪಟ್ಟಣ ಪಂಚಾಯತಿ ಅಧ್ಯಕ್ಷೆ ಚೈತ್ರಾ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ, ಚಿಕ್ಕವೀರನಾಯಕ, ಎಸ್.ಕೆ. ಸಂತೋಷ ಕುಮಾರ್, ಇಟ್ನ ರಾಜಣ್ಣ, ಶಿವಣ್ಣ, ಗೋಪಾಲಸ್ವಾಮಿ, ಎಚ್.ಡಿ. ರತ್ನಯ್ಯ, ರಮೇಶ, ಶಂಭುಲಿಂಗನಾಯಕ, ಎಸ್.ಆರ್. ನಾಗರಾಮ, ನಾಗರಾಜು, ನಿಂಗರಾಜು, ಬಂಗಾರಯ್ಯ, ದಾಸಚಾರಿ, ಎಸ್.ಡಿ. ಸಣ್ಣಸ್ವಾಮಿ, ಅಣ್ಣಯ್ಯ ಸ್ವಾಮಿ, ಮಹೇಶ್, ಮಲ್ಲೇಶ್, ಲಿಂಗಚಾರ್, ಸಕಲೇಶ್, ಶಾಂಭವಿಮೂರ್ತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.