ಮೈಸೂರು: ‘ಸರ್ಕಾರದ ಮಟ್ಟದಲ್ಲಿ ಸಮನ್ವಯತೆ ಕೊರತೆ ಇರುವುದಿಂದಲೇ ಐಎಎಸ್ ಅಧಿಕಾರಿಗಳು ಕಚ್ಚಾಟಕ್ಕೆ ಇಳಿದಿದ್ದಾರೆ. ಹಿರಿಯ ಅಧಿಕಾರಿಗಳು ಅಖಾಡದಲ್ಲಿ ಕುಸ್ತಿ ಆಡುತ್ತಿರುವುದು ಮೈಸೂರಿಗೆ ಅಗೌರವ ತಂದಿರುವ ಬೆಳವಣಿಗೆ’ ಎಂದು ಕರ್ನಾಟಕ ರಾಜ್ಯ ರೈತರ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅಸಮಾಧಾನ ಹೊರಹಾಕಿದರು.

ಅಧಿಕಾರಿಗಳು ಏನೇ ಸಮಸ್ಯೆ ಇದ್ದರೂ ಸರ್ಕಾರದ ಮುಂದೆ ಹೇಳಿಕೊಳ್ಳಬೇಕಾಗಿತ್ತು. ಅದರದ್ದೇ ಆದ ನೀತಿ ನಿಯಮಗಳು ಇವೆ. ಅವೆಲ್ಲವನ್ನೂ ಮಿತಿ ಮೀರಿರುವುದಿಂದ ಈ ರೀತಿಯ ಬೆಳವಣಿಗೆಗಳು ನಡೆಯುತ್ತಿವೆ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ದೂರಿದರು.

ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಇದಕ್ಕೆ ಮೊದಲ ಕಾರಣ. ಕೋವಿಡ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಅವರ ನಡುವೆಯೇ ಸಮನ್ವಯತೆ ಕೊರತೆ ಇದೆ. ಆದ್ದರಿಂದ ಇಲ್ಲಿ ಅಧಿಕಾರಿಗಳು ಲಂಗು ಲಗಾಮಿಲ್ಲದೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.