ಹುಣಸೂರು: ‘ತಾಲ್ಲೂಕಿನ ಲಕ್ಷ್ಮಣತೀರ್ಥ ನದಿ ಶುದ್ಧೀಕರಣಕ್ಕೆ ಸರ್ಕಾರ ತುರ್ತಾಗಿ ₹ 70 ಕೋಟಿ ಅನುದಾನ ಬಿಡುಗಡೆಗೊಳಿಸಬೇಕು’ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಸದನದಲ್ಲಿ ಸರ್ಕಾರದ ಗಮನ ಸೆಳೆದರು.

ವಿಧಾನಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ನಗರ, ನದಿ ಅಂಚಿನ ಗ್ರಾಮಗಳಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ತ್ಯಾಜ್ಯ ನೀರು ನದಿಗೆ ಸೇರಿ ಕಲುಷಿತಗೊಂಡಿದೆ. ತಾಲ್ಲೂಕಿನಲ್ಲಿ 55 ಕಿ.ಮೀ. ಹರಿಯುವ ನದಿಯು ಕೃಷಿ ಹಾಗೂ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ಆಶ್ರಯವಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅನುದಾನ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು.

‘ನದಿ ನೀರು ಕಲುಷಿತಗೊಳ್ಳುವುದನ್ನು ನಿಯಂತ್ರಿಸಲು ಕ್ರಮವಹಿಸಿಲ್ಲ ಎಂದು ಆರೋಪಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಗರಸಭೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ನದಿ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂದು ಪ್ರಮಾಣ ಪತ್ರ ನೀಡಿದೆ. ಶುದ್ಧೀಕರಣಕ್ಕೆ ಅಂದಾಜು ವೆಚ್ಚ, ಯೋಜನೆ ಸಲ್ಲಿಸಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದೆ’ ಎಂದರು.

‘ಒಳಚರಂಡಿ ನೀರು ನದಿಯ ಒಡಲು ಸೇರುವುದನ್ನು ತಪ್ಪಿಸಲು ಕೈಗೊಳ್ಳಬೇಕಾದ ಪರಿಹಾರ ಕಾಮಗಾರಿಗೆ ₹ 70 ಕೋಟಿ ಅವಶ್ಯವಿದ್ದು, ಸರ್ಕಾರ ಕೂಡಲೇ ಅನುದಾನ ನೀಡಬೇಕು. ಇಲ್ಲದಿದ್ದರೆ, ಇದೇ ನೀರು ಕಾವೇರಿ ಒಡಲು ಸೇರಿ ಮೈಸೂರು, ಮಂಡ್ಯ, ಬೆಂಗಳೂರಿನ ನಾಗರಿಕರು ಬಳಸುವ ಪರಿಸ್ಥಿತಿ ಎದುರಾಗಿದೆ’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.