ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲ್ಯಾಪ್‌ಟಾಪ್‌, ಮೊಬೈಲ್ ಕಳ್ಳನ ಬಂಧನ

Published 18 ಏಪ್ರಿಲ್ 2024, 14:57 IST
Last Updated 18 ಏಪ್ರಿಲ್ 2024, 14:57 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಮೈಸೂರು: ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಲ್ಯಾಪ್‌ಟಾಪ್‌ ಹಾಗೂ ಮೊಬೈಲ್‌ ಕಳವು ಮಾಡುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿ, ₹10.28 ಲಕ್ಷ ಮೌಲ್ಯದ 8 ಲ್ಯಾಪ್‌ಟಾಪ್‌ ಮತ್ತು 9 ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ.

ಭಾನುವಾರ ಕಾಸರಗೋಡಿನ ದಂಪತಿಗಳಿಬ್ಬರು ಪುತ್ತೂರು ರೈಲ್ವೆ ನಿಲ್ದಾಣದಿಂದ ಮುರುಡೇಶ್ವರ ಎಕ್ಸ್‌ಪ್ರೆಸ್‌ ಮೂಲಕ ಮೈಸೂರಿಗೆ ತಲುಪಿದ್ದು, ಅವರಲ್ಲಿದ್ದ ಲ್ಯಾಪ್‌ಟಾಪ್‌, ಮೊಬೈಲ್‌, ಚಿನ್ನದ ಕರಿಮಣಿ ಸರ, ವಾಚ್‌ ಕಳವಾಗಿದ್ದು, ಅವರು ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

‘ಪ್ರಕರಣದ ಪತ್ತೆಗಾಗಿ ಅಧಿಕಾರಿ ಹಾಗೂ ಸಿಬ್ಬಂದಿ ತೆರಳುತ್ತಿದ್ದಾಗ ಅನುಮಾನಾಸ್ಪದ ವ್ಯಕ್ತಿಯನ್ನು ತಡೆದು ವಿಚಾರಣೆ ನಡೆಸಿದಾಗ ಆತ ಪ್ರಯಾಣಿಕರ ವಸ್ತುಗಳನ್ನು ಕಳವು ಮಾಡುತ್ತಿರುವುದು ತಿಳಿದು ಬಂದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT