ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಳೆದಾಡಿದ ಜೆಡಿಎಸ್ ಕಾರ್ಯಕರ್ತರು: ನಾಮಪತ್ರ ಸಲ್ಲಿಸದ ಶ್ರೀಕಂಠೇಗೌಡ

Published 16 ಮೇ 2024, 10:24 IST
Last Updated 16 ಮೇ 2024, 10:24 IST
ಅಕ್ಷರ ಗಾತ್ರ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಕೆ.ಟಿ. ಶ್ರೀಕಂಠೇಗೌಡ ಅವರು ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ಗುರುವಾರ ತಮ್ಮ ಬೆಂಬಲಿಗರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಜೆಡಿಎಸ್‌ನ ಕೆಲವು ಕಾರ್ಯಕರ್ತರು ಗದ್ದಲ‌ ಎಬ್ಬಿಸಿದರು. ನಾಮಪತ್ರ ಸಲ್ಲಿಸದಂತೆ ಒತ್ತಾಯಿಸಿ ಶ್ರೀಕಂಠೇಗೌಡರನ್ನು ಎಳೆದಾಡಿದರು. ಇದರಿಂದ ಅವರು ಗಾಯಗೊಂಡು ಆಸ್ಪತ್ರೆ ಸೇರಿದ್ದು ನಾಮಪತ್ರ ಸಲ್ಲಿಸಲು ಆಗಲಿಲ್ಲ.

ಕ್ಷೇತ್ರದಿಂದ ಜೆಡಿಎಸ್–ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ವಿವೇಕಾನಂದ ಅವರಿಗೆ ಪಕ್ಷವು ಬಿ ಫಾರಂ ನೀಡಿತ್ತು. ಇದರಿಂದ ಬೇಸರಗೊಂಡಿದ್ದ ಶ್ರೀಕಂಠೇಗೌಡ ಪಕ್ಷೇತರರಾಗಿ ಸ್ಪರ್ಧಿಸುವ ಆಶಯದೊಂದಿಗೆ ಗುರುವಾರ ಸಭೆ ನಡೆಸಿದ್ದರು. ಈ ವೇಳೆ ಗದ್ದಲ ಏರ್ಪಟ್ಟು ಅವರು ಆಸ್ಪತ್ರೆ ಸೇರಿದರು.

ನಾಮಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT