ಮೈಸೂರು: ಚಾಮುಂಡಿಬೆಟ್ಟದ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿರುವ ವಿಡಿಯೊ ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿದೆ. ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಈ ವಿಡಿಯೊ ಚಿತ್ರೀಕರಿಸಿದ್ದಾರೆ.
ಚಿರತೆಯು ಎಡಬದಿಯಿಂದ ಬಲಬದಿಗೆ ಜಿಗಿದ್ದು, ಕೂದಲೆಳೆಯ ಅಂತರದಲ್ಲಿ ಸವಾರರು ಪಾರಾಗಿದ್ದಾರೆ.
ಜೆಎಸ್ಎಸ್ ಆಯುರ್ವೇದ ಆಸ್ಪತ್ರೆಯಿಂದ ಲಲಿತಾದ್ರಿಪುರ ವೃತ್ತದ ಕಡೆಗೆ ಮೂರು ಚಿರತೆಗಳು ಓಡಾಡಿವೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ಹರಿದಾಡಿದೆ.