ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಬಿ.ವೈ.ವಿಜಯೇಂದ್ರ ರಾಜಿನಾಮೆ ನೀಡಲಿ’

Published 29 ಮೇ 2024, 14:21 IST
Last Updated 29 ಮೇ 2024, 14:21 IST
ಅಕ್ಷರ ಗಾತ್ರ

ಮೈಸೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿ.ವೈ.ವಿಜಯೇಂದ್ರ ನಿಲುವು ಖಂಡಿಸಿ ನಾಯಕ ಸಮುದಾಯದ ಮುಖಂಡರು ಸುಣ್ಣದಕೇರಿ ಮಹದೇಶ್ವರ ಸ್ವಾಮಿ ದೇವಸ್ಥಾನದ ಬಳಿ ಬುಧವಾರ ಪ್ರತಿಭಟಿಸಿದರು.

ಮಾಜಿ ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಮಾತನಾಡಿ, ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಬಹುಕೋಟಿ ಅಕ್ರಮ‌ ಬಯಲಿಗೆ ಎಳೆದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ತಮಗೂ ಸಂಬಂಧವಿಲ್ಲ ಎಂದು ಸಚಿವ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಯಾರೇ ತಪ್ಪು ಮಾಡಿದ್ದರೂ ತನಿಖೆ ಮಾಡಿ ಶಿಕ್ಷೆ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಆದರೂ ಅವರ ವಿರುದ್ಧ ಅಪವಾದ ಮಾಡಲಾಗುತ್ತಿದೆ’ ಎಂದರು.

‘ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಚಿವರ ರಾಜಿನಾಮೆಗೆ ಒತ್ತಾಯಿಸುತ್ತಿರುವುದು ವಿಷಾದನೀಯ. ಅವರು ಉದ್ದೇಶಪೂರ್ವಕವಾಗಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು,  ನಾಯಕ ಸಮುದಾಯದವರನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಸಾಧ್ಯವಿಲ್ಲ. ಸುಳ್ಳು ಹೇಳಿಕೆ ನೀಡುತ್ತಿರುವ ವಿಜಯೇಂದ್ರ ಅವರೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲಿ’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT